ಶುಕ್ರವಾರ, ಜುಲೈ 30, 2021
27 °C

ವಾಚಕರ ವಾಣಿ: ಪಠ್ಯಪುಸ್ತಕವನ್ನಾದರೂ ಒದಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಾ ಬಂದಂತೆ ಶಾಲೆಗಳು ಚಟುವಟಿಕೆಯನ್ನು ಪ್ರಾರಂಭಿ ಸಿವೆ. ಶಿಕ್ಷಕರು ಶಾಲೆಗಳ ಕಡೆಗೆ ಮುಖ ಮಾಡಿದ್ದಾರೆ.

ಮೊಬೈಲ್‌ ಫೋನ್‌ ಮೂಲಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಗಳನ್ನು ನೀಡುತ್ತಿದ್ದಾರೆ. ಆದರೆ ಅನೇಕ ವಿದ್ಯಾರ್ಥಿಗಳಿಗೆ ಆ್ಯಂಡ್ರಾಯ್ಡ್ ಮೊಬೈಲ್‌ಗಳ ಸೌಕರ್ಯವಿಲ್ಲ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿ ಅಭ್ಯಾಸ ಮಾಡಲು ಪಠ್ಯಪುಸ್ತಕಗಳ ಅಗತ್ಯವಿದೆ. ಆದರೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಪುಸ್ತಕಗಳನ್ನು ಹಿಂತಿರುಗಿಸಿ, ಈ ವರ್ಷದ ಪುಸ್ತಕಗಳನ್ನು ಹಳೆ ವಿದ್ಯಾರ್ಥಿಗಳಿಂದ ಕೊಡಿಸುವುದಾಗಿ ಹೇಳುತ್ತಿದ್ದಾರೆ.

ಎಷ್ಟೋ ವಿದ್ಯಾರ್ಥಿಗಳು ತಮ್ಮ ಶಾಲೆಗಳನ್ನು ಬದಲಿಸಿದ್ದಾರೆ, ಮತ್ತಷ್ಟು ವಿದ್ಯಾರ್ಥಿಗಳು ಪುಸ್ತಕಗಳನ್ನೇ ಹಾಳು ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಕನಿಷ್ಠ ಹೊಸ ಪಠ್ಯಪುಸ್ತಕಗಳನ್ನಾದರೂ ಸರ್ಕಾರವು ವಿದ್ಯಾರ್ಥಿಗಳಿಗೆ ಒದಗಿಸುವಂತೆ ಆಗಬೇಕು. ಇಲ್ಲದಿದ್ದರೆ ಈಗಾಗಲೇ ಕುಸಿದಿರುವ ವಿದ್ಯಾರ್ಥಿಗಳ ಕಲಿಕೆ ಮತ್ತಷ್ಟು ಕುಸಿಯಲು ಅವಕಾಶ ಆಗುತ್ತದೆ.
-ಈ.ಬಸವರಾಜು, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು