ಬುಧವಾರ, ಜನವರಿ 27, 2021
18 °C

ವಾಚಕರ ವಾಣಿ: ರೈತನ ವರಿಸಿದರೂ ಸಿಗಲಿ ಪ್ರೋತ್ಸಾಹಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರ್ಚಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ₹3 ಲಕ್ಷ ಪ್ರೋತ್ಸಾಹಧನ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಮದುವೆಯ ವಿಷಯದಲ್ಲಿ ಅರ್ಚಕರು ಎದುರಿಸುತ್ತಿರುವ ಸಮಸ್ಯೆಯು ರೈತಾಪಿ ಗಂಡುಮಕ್ಕಳದೂ ಆಗಿದೆ. ವ್ಯವಸಾಯ ಮಾಡಿಕೊಂಡು ಹಳ್ಳಿಯಲ್ಲಿ ನೆಲೆಸಿರುವ ರೈತರಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ಎಲ್ಲರಿಗಿಂತಲೂ ಮೊದಲಾಗಿ, ಹಳ್ಳಿಯ ರೈತನೇ ತನ್ನ ಮಗಳನ್ನು ರೈತನಿಗೆ ಮದುವೆ ಮಾಡಲು ಮುಂದೆ ಬರುತ್ತಿಲ್ಲ. ಅದೊಂದು ಲಾಭವಿಲ್ಲದ ಕಸುಬು ಎಂಬುದೇ ಇದಕ್ಕೆ ಕಾರಣ. ಆದ್ದರಿಂದ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೂ ಸರ್ಕಾರ ಪ್ರೋತ್ಸಾಹಧನ ಘೋಷಿಸಬೇಕು.

–ನಾಗರಾಜ್ ಮಾದೇಗೌಡ, ಕನಕಪುರ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು