ಗುರುವಾರ , ಜೂನ್ 30, 2022
24 °C

ವಾಚಕರ ವಾಣಿ | ಭ್ರಷ್ಟಾಚಾರ ಆರೋಪ; ಪಂಜಾಬ್ ಸಚಿವರ ವಜಾ, ಹೊಸ ಆಶಾಕಿರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದ ವಿಜಯ್‌ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿ ಬಂಧಿಸಲಾಗಿದೆ. ಇದು ಎಎಪಿಯು ಭ್ರಷ್ಟಾಚಾರದ ವಿರುದ್ಧ ಸಾರ್ವತ್ರಿಕವಾಗಿ ಮೂಡಿಸಿದ ಹೊಸ ಆಶಾಕಿರಣ.

ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ, ಶಿಸ್ತು, ಸ್ವಚ್ಛ ಎಂದು ಹೇಳಿಕೊಳ್ಳುವ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಶೇ 40ರ ಕಮಿಷನ್ ಆರೋಪ ಕೇಳಿಬಂದರೂ ಇಲ್ಲಿ ಇದು ಸಹಜ ಎಂಬಂತೆ ಅಧಿಕಾರಸ್ಥರು ನಡೆದುಕೊಂಡಿದ್ದಾರೆ. ಸಂಬಂಧಿಸಿದ ಸಚಿವರನ್ನು ಆಡಳಿತ ಪಕ್ಷದ ಮುಖಂಡರು ಸಮರ್ಥಿಸಿಕೊಳ್ಳಲು ಸಹ ಹಿಂದೇಟು ಹಾಕುವುದಿಲ್ಲ. ರಾಜಕಾರಣದ ಎಲ್ಲ ಮಗ್ಗುಲಿನಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರಕ್ಕೆ ಹೀಗಾದರೆ ಕೊನೆ ಎಂದು? ಪಂಜಾಬ್ ಮಾದರಿ ಅನುಕರಣೀಯವಲ್ಲವೇ?
ಗಣಪತಿ ಶಿರಳಗಿ, ಸಾಗರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು