ಗುರುವಾರ , ಆಗಸ್ಟ್ 22, 2019
26 °C

ಆಪ್ತರಕ್ಷಕರು ಇವರು...

Published:
Updated:

ದಕ್ಷಿಣ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಹಲವು ಸೇತುವೆಗಳು ಜಲಾವೃತಗೊಂಡಿವೆ. ಕೆಲವು ಹಳ್ಳಿಗಳು ಕೂಡ ಸಂಪೂರ್ಣ ಜಲಾವೃತಗೊಂಡಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇಂತಹ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ತಂಡಗಳು ನೆರೆ ಸಂತ್ರಸ್ತರನ್ನು ರಕ್ಷಿಸಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿರುವುದು ಸ್ತುತ್ಯರ್ಹ ಸಂಗತಿ. ನಡುನೀರಿನಲ್ಲಿ ಇದ್ದ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಿದ ಇವರ ಸೇವೆ ಶ್ಲಾಘನೀಯ.

– ಬಾಬುಪ್ರಸಾದ್‌, ಬಳ್ಳಾರಿ

Post Comments (+)