ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಕ್ರಾಮಿಕ ರೋಗ: ಮುಂಜಾಗ್ರತೆ ಅಗತ್ಯ

Last Updated 3 ಜೂನ್ 2019, 17:08 IST
ಅಕ್ಷರ ಗಾತ್ರ

ಮಳೆಗಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ, ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಮಲೇರಿಯಾ, ಡೆಂಗಿ, ಚಿಕೂನ್ ಗುನ್ಯಾದಂತಹ ಮಾರಕ ರೋಗಗಳು ಜನರನ್ನು ಕಾಡತೊಡಗಿವೆ.

ಕಸದ ರಾಶಿ, ತಗ್ಗು ಪ್ರದೇಶಗಳಲ್ಲಿ ನಿಲ್ಲುವ ನೀರು, ಸೊಳ್ಳೆಗಳ ಹಾವಳಿಯು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮೂಲ ಕಾರಣವಾಗುತ್ತಿವೆ.

ಜಿಲ್ಲಾ ಆಡಳಿತವು ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಮೂಲ ಸೌಕರ್ಯ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಮಾರಕ ಸೊಳ್ಳೆಗಳ ಕಡಿತದಿಂದ ರಕ್ಷಿಸಿಕೊಳ್ಳಲು ಫಾಗಿಂಗ್ ನಡೆಸುವ ಬಗ್ಗೆ ಸ್ಥಳೀಯ ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಪರಿಸರ ಸಂರಕ್ಷಣೆಗೆ ಜನಸಾಮಾನ್ಯರು ಸಹ ಕೈಜೋಡಿಸಿದರೆ ಇಂತಹ ರೋಗಗಳ ನಿಯಂತ್ರಣ ಸಾಧ್ಯ.

ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಪುತ್ತೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT