ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಡೆಂಗಿ ಜ್ವರ: ಇರಲಿ ಮುನ್ನೆಚ್ಚರಿಕೆ

ಅಕ್ಷರ ಗಾತ್ರ

ಮಳೆಗಾಲದ ಈ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಗಿ ಜ್ವರದ ಹಾವಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಜುಲೈ ತಿಂಗಳೊಂದರಲ್ಲೇ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಾಗಾಗಿ, ಸಾರ್ವಜನಿಕರು ತಮ್ಮ ಮನೆ ಮತ್ತು ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು.

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ ಮತ್ತು ಹೊಂಡಗಳಲ್ಲಿ ನಿಂತ ನೀರು ಸೊಳ್ಳೆಗಳ ಉತ್ಪತ್ತಿಯ ತಾಣಗಳಾಗಿವೆ. ಇದು ರೋಗದ ಭೀತಿಯನ್ನು ಹೆಚ್ಚಿಸುವುದರಿಂದ ಸರ್ಕಾರವು ಡೆಂಗಿ ತಡೆಗಟ್ಟಲು ಕ್ರಮ ವಹಿಸಬೇಕಿದೆ. ಅಂತೆಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಿ ರೋಗ ಬಾಧಿತರಿಗೆ ಅನುಕೂಲ ಕಲ್ಪಿಸಿಕೊಡಲಿ.

- ರಿಯಾಝ್ ಅಹ್ಮದ್,ರೋಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT