ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚಗುಳಿತನ ಕಾಣುತ್ತಿಲ್ಲವೇ?

Last Updated 14 ಏಪ್ರಿಲ್ 2022, 15:28 IST
ಅಕ್ಷರ ಗಾತ್ರ

ರಾಜ್ಯ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹೇಳಿದ್ದಾರೆ. ಇದು ಅಕ್ಷರಶಃ ಸತ್ಯ. ಕಟ್ಟಡ ಕಾಮಗಾರಿಯಲ್ಲಿ ಮಾತ್ರವಲ್ಲದೆ ಇಡೀ ಆರೋಗ್ಯ ಇಲಾಖೆಯಲ್ಲಿ ಲಂಚಗುಳಿತನ ತಾಂಡವವಾಡುತ್ತಿದೆ. ಅಧಿಕಾರಿಗಳ ನೇಮಕಾತಿ, ವರ್ಗಾವಣೆ ಮತ್ತು ಮೆಡಿಕಲ್ ಕಾಲೇಜುಗಳ ನಿರ್ದೇಶಕ ಹುದ್ದೆಯ ನೇಮಕಾತಿಗೆ ಹಣವೇ ಪ್ರಧಾನ ಪಾತ್ರ ವಹಿಸುತ್ತಿದೆ ಎಂಬ ಆರೋಪಗಳು ಇವೆ. ಇಂತಹ ಸ್ಥಿತಿಯಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ.

ಆರೋಗ್ಯ ಇಲಾಖೆಯ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದರಲ್ಲಿ ವಿರೋಧ ಪಕ್ಷಗಳ ನಾಯಕರೂ ವಿಫಲರಾಗಿದ್ದಾರೆಂದೇ ಅನಿಸುತ್ತದೆ. ಭ್ರಷ್ಟಾಚಾರವನ್ನು ಸಹಿಸುವುದೇ ಇಲ್ಲ ಎಂದು ಹೇಳುವ ಬಿಜೆಪಿ ವರಿಷ್ಠರಿಗೆ ಇವೆಲ್ಲವೂ ತಿಳಿಯುತ್ತಿಲ್ಲವೇ ಅಥವಾ ಏನಾದರೂ ಕ್ರಮ ತೆಗೆದುಕೊಂಡರೆ ಸರ್ಕಾರಕ್ಕೆ ಅಪಾಯವಾಗಬಹುದು ಎಂಬ ಭಯವೇ?

ಆತ್ರೇಯ,ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT