ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಬಿಸಿಯೂಟದಲ್ಲಿ ಮೊಟ್ಟೆ ನೀಡುವಿಕೆ ಸ್ವಾಗತಾರ್ಹ!

ಅಕ್ಷರ ಗಾತ್ರ

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳು ಆಹಾರ ಸೇವಿಸುತ್ತಿದ್ದಾರೆ. ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯಲ್ಲಿ ಗಣನೀಯ ಹೆಚ್ಚಳಕ್ಕೆ ಈ ಯೋಜನೆ ಪೂರಕವಾಗಿ ಒದಗಿಬಂದಿದೆ ಎಂಬ ಮಾತಿದೆ. ಇದು ಸ್ವಾಗತಾರ್ಹ.ಮಕ್ಕಳಿಗೆ ಪಾಠದ ಜೊತೆಗೆ ಸತ್ವಯುತ ಆಹಾರ ದೊರೆಯುತ್ತಿದೆ. ಇದರಿಂದಾಗಿ, ಕಲಿಕೆಯಲ್ಲಿ ಮಕ್ಕಳು ಹೆಚ್ಚು ಲವಲವಿಕೆಯಿಂದ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ. ಈಗ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ನಿರ್ಧರಿಸಿರುವುದು ಒಳ್ಳೆಯ ಉಪಕ್ರಮ. ಹೆಚ್ಚಿನ ಪೌಷ್ಟಿಕಾಂಶ ಇರುವ ಮೊಟ್ಟೆಯು ಮಕ್ಕಳ ಬೆಳವಣಿಗೆಗೆ ಸಹಕಾರಿ.

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮ ಕೂಡ ಮೆಚ್ಚುವಂತಹುದು. ನ್ಯೂನಪೋಷಣೆ ಹೋಗಲಾಡಿಸಲು ಈ ಬಗೆಯ ಉಪಕ್ರಮಗಳು ನೆರವಾಗಲಿವೆ. ಅಪೌಷ್ಟಿಕತೆಯು ಗಂಭೀರ ಸಮಸ್ಯೆ. ಅದನ್ನು ನಿವಾರಿಸಲು ಅಷ್ಟೇ ಗಂಭೀರ ಪ್ರಯತ್ನಗಳು ಆಗಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT