ಮಂಗಳವಾರ, ಅಕ್ಟೋಬರ್ 26, 2021
24 °C

ಐಪಿಎಲ್ ಬೆಟ್ಟಿಂಗ್ ದಂಧೆಗಿರಲಿ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಪಿಎಲ್ ಕ್ರಿಕೆಟ್ ಪಂದ್ಯಗಳು ಇದೀಗ ನಡೆಯುತ್ತಿವೆ. ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು, ವಿದ್ಯಾರ್ಥಿಗಳನ್ನು ಇವು ಹೆಚ್ಚಿಗೆ ಆಕರ್ಷಿಸುತ್ತಿವೆ. ಜೊತೆಗೆ ಬೆಟ್ಟಿಂಗ್ ದಂಧೆಗೂ ಕಾರಣವಾಗಿವೆ. ಅನೇಕರು ಈ ದಂಧೆಯಲ್ಲಿ ಸಿಲುಕುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ಆನ್‌ಲೈನ್ ಕ್ಲಾಸ್ ನೆಪ ಹೇಳಿಕೊಂಡು ಮೊಬೈಲ್‌ನಲ್ಲಿ ಕ್ರಿಕೆಟ್ ವೀಕ್ಷಿಸುತ್ತಾ ಬೆಟ್ಟಿಂಗ್ ದಂಧೆಯಲ್ಲಿ ತೊಡಗುತ್ತಿದ್ದಾರೆ. ಇವರಲ್ಲಿ ಕಾಲೇಜು ವಿದ್ಯಾರ್ಥಿಗಳು, ಯುವಕರು, ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಹಲವು ಯುವಕರು ಇದಕ್ಕಾಗಿ ಸಾಲ ಮಾಡಿ ಮೊಬೈಲ್, ಬೈಕ್ ಅಡಮಾನ ಮಾಡಿ ಕೈ ಸುಟ್ಟುಕೊಂಡಿದ್ದಾರೆ.

ಇದರಲ್ಲಿ ತೊಡಗಿದ ವಿದ್ಯಾರ್ಥಿಗಳು, ಯುವಕರು ಗೆದ್ದ ಖುಷಿಗೆ, ಸೋತ ದುಃಖಕ್ಕೆ ಮದ್ಯದ ಅಮಲಲ್ಲಿ ತೇಲಿದ ನಿದರ್ಶನಗಳು ಇವೆ. ಸಾಲ ತೀರಿಸಲಾಗದೆ ಊರು ಬಿಟ್ಟು ಹೋದ, ಆತ್ಮಹತ್ಯೆಗೆ ಶರಣಾದ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗಿವೆ. ಇನ್ನಷ್ಟು ಜನ ಇಂತಹ ಸಂಕಷ್ಟಕ್ಕೆ ಸಿಲುಕದಂತೆ ಇದಕ್ಕೆಲ್ಲ ಕಡಿವಾಣ ಹಾಕಬೇಕಾಗಿದೆ.

-ಶಿವಕುಮಾರ್ ಯರಗಟ್ಟಿಹಳ್ಳಿ, ಚನ್ನಗಿರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು