ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮೀಣರಿಗೆ ಉದ್ಯೋಗ ನೀಡಿ’

Last Updated 4 ಮೇ 2018, 6:20 IST
ಅಕ್ಷರ ಗಾತ್ರ

ಬೆಳಗಾವಿ: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಗ್ರಾಮೀಣ ಜನರಿಗೆ ಉದ್ಯೋಗ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಸೂಚಿಸಿದರು.

ಸವದತ್ತಿ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಏಪ್ರಿಲ್‌ನಲ್ಲಿ ಮದಲೂರ ಗ್ರಾಮ ಪಂಚಾಯ್ತಿಯು 2,814 ಮಾನವ ದಿನ ಸೃಷ್ಟಿಸಿ, ಜನರಿಗೆ ಉದ್ಯೋಗ ನೀಡಿದೆ. ಇದು ಸವದತ್ತಿ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚಾಗಿದೆ. ಇಷ್ಟೊಂದು ಕೆಲಸ ನೀಡಿದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಂಕಪ್ಪ ಪಡಿ, ತಾಂತ್ರಿಕ ಸಹಾಯಕರಾದ ಸಂಜಯ ಚೌಗಲೆ ಮತ್ತು ಗಣಕಯಂತ್ರ ನಿರ್ವಾಹಕರಾದ ಸುಬಾನಿ ದೊಡಮನಿ ಅಭಿನಂದನೆಗಳು ಎಂದು ಹೇಳಿದರು.

ಕಡಿಮೆ ಮಾನವ ದಿನ ಸೃಜನೆ ಮಾಡಿದ ಗ್ರಾಮ ಪಂಚಾಯ್ತಿಗಳಿಗೆ ಪ್ರಗತಿ ಸಾಧಿಸಲು ತಿಳಿಸಿದರು. ನಿಗದಿತ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿಯಾಗುವಂತೆ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಮತ್ತು ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಎಸ್.ಬಿ. ಬನಶಂಕರಿ, ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲಮಡಿ (ಉದ್ಯೋಗ) ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕರು ಪ್ರವೀಣಕುಮಾರ ಸಾಲಿ, ಜಿಲ್ಲಾ ಕಾರ್ಯಕ್ರಮ ಸಹಾಯಕ ಸಂಯೋಜಕರಾದ ಬಸವರಾಜ್ ಎನ್. (ಎ.ಡಿ.ಪಿ.ಸಿ), ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕಿನ ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ, ನಾಗರಾಜ ಬೆಹರೆ ಟಿ.ಎಮ್.ಐಎಸ್, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರದಲ್ಲಿ ಭಾಗವಹಿಸಿದ್ದರು.

ಗೃಹ ಖಾತರಿ ಯೋಜನೆ: ನರೇಗಾ ಯೋಜನೆಯಡಿ ವಸತಿ ಯೋಜನೆಯ ಫಲಾನುಭವಿಗಳಿಗೆ 90 ಮಾನವ ದಿನಗಳನ್ನು ನೀಡಲು ಅವಕಾಶವಿದೆ. ಈ ಕಾರ್ಯಕ್ರಮದಲ್ಲಿ ಕಳೆದ ಏಪ್ರಿಲ್‌ನಲ್ಲಿ ವಿವಿಧ ಹಂತಗಳಲ್ಲಿ ನಿರ್ಮಾಣವಾಗುತ್ತಿರುವ ಒಟ್ಟು 40,902 ಫಲಾನುಭವಿಗಳ ಪೈಕಿ 37,631 ಫಲಾನುಭವಿಗಳು ಸಹಾಯ ಪಡೆದುಕೊಂಡಿದ್ದಾರೆ.

ಜಿಲ್ಲೆಯ ಅರ್ಹ ಫಲಾನುಭವಿಗಳು ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಸಮೀಪದ ಪಂಚಾಯ್ತಿ ಅಧಿಕಾರಿಗಳನ್ನು ಭೇಟಿಯಾಗಬಹುದು ಎಂದು ಜಿಲ್ಲಾ ಪಂಚಾಯ್ತಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT