ಗುರುವಾರ , ಫೆಬ್ರವರಿ 27, 2020
19 °C

ಯೋಜನೆಗಳ ಸದುಪಯೋಗ: ಜಾಗೃತಿ ಬೇಕಾಗಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರವು ಜನಸಾಮಾನ್ಯರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆಯಾದರೂ ಇವುಗಳಲ್ಲಿ ಕೆಲವು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರು ವಿಫಲರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರವೇ ಆಗಿದೆ. ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರವು ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಆದರೆ ಈ ಕಾರ್ಯಕ್ರಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸೇರುತ್ತಾರೆ. ಜೊತೆಗೆ, ಗ್ರಾಮ ಮಟ್ಟದಲ್ಲಿ ಜನರಿಗೆ ಸೂಕ್ತ ಅರಿವು ಮೂಡಿಸುವಲ್ಲಿ ಸರ್ಕಾರ ವಿಫಲಗೊಂಡಿದೆ. 

ಪಹಣಿ ತಿದ್ದುಪಡಿ, ಸಂಧ್ಯಾ ಸುರಕ್ಷಾ, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಸದುಪಯೋಗವನ್ನು ಬಹುತೇಕರು ಮಧ್ಯವರ್ತಿಗಳಿಲ್ಲದೇ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿ ಫಲಾನುಭವಿಗೂ ಯೋಜನೆಯ ನೆರವು ದೊರೆಯುವಂತೆ ಆಗಬೇಕು. ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು.

-ವಿಜಯ್‌ಕುಮಾರ್ ಎಚ್.ಕೆ., ರಾಯಚೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)