ಶನಿವಾರ, ಫೆಬ್ರವರಿ 22, 2020
19 °C

ಚಿತ್ರನಗರಿ ಸ್ಥಳಾಂತರ: ಪರಾಮರ್ಶೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಚಿತ್ರನಗರಿ’ಯನ್ನು ಮೈಸೂರಿನಲ್ಲಿಯೇ ಸ್ಥಾಪಿಸಬೇಕೆಂದು ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಇತ್ತೀಚೆಗೆ ಒತ್ತಾಯಿಸಿದ್ದಾರೆ. ಚಲನಚಿತ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ.ಕೆ.ಮೂರ್ತಿ, ಆನಂತರ ಅಧ್ಯಕ್ಷರಾದ ಕೆಂಪರಾಜ ಅರಸು ಅವರು ಚಿತ್ರನಗರಿಯು ಬೆಂಗಳೂರಿನಲ್ಲಿಯೇ ಆಗಬೇಕೆಂದು ಆಗಿನ ಸರ್ಕಾರಗಳಿಗೆ ವರದಿ ಸಲ್ಲಿಸಿದ್ದರು.

ಕನ್ನಡ ಚಲನಚಿತ್ರರಂಗ ಐವತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ, ಆ ಉತ್ಸವ ಸಮಿತಿಯಲ್ಲಿದ್ದ ಪತ್ರಕರ್ತ ಬಿ.ವಿ.ವೈಕುಂಠರಾಜು ಅವರು ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಭೇಟಿ ಮಾಡಿ, ಡಾ. ರಾಜ್‍ಕುಮಾರ್ ಅವರ ನಾಯಕತ್ವ ಬಳಸಿಕೊಂಡು ‘ಚಿತ್ರನಗರಿ’ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕೆಂದು ಹೇಳಿದ್ದರು. ಈ ಕುರಿತು ಚಿತ್ರೋದ್ಯಮದ ಪರಾಮರ್ಶೆ ಅಗತ್ಯ.

ಆರ್.ವೆಂಕಟರಾಜು, ಬೆಂಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)