ಮಂಗಳವಾರ, ಮಾರ್ಚ್ 31, 2020
19 °C

ಆಕಾಶವಾಣಿ: ಹಿಂದಿ ಜಾಹೀರಾತು ನಿಲ್ಲಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು ಆಕಾಶವಾಣಿಯು ಗುಣಮಟ್ಟದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದರ ಮೂಲಕ ಅಪಾರ ಜನಮನ್ನಣೆ ಗಳಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಅಚ್ಚುಮೆಚ್ಚಿನ ಪ್ರಬಲ ಮಾಧ್ಯಮವಾಗಿ ಈಗಲೂ ಮುಂಚೂಣಿಯಲ್ಲಿದೆ. ಆದರೆ ಇತ್ತೀಚೆಗೆ ಸರ್ಕಾರಿ ಯೋಜನೆಗಳು, ಆರೋಗ್ಯ ಸೇರಿದಂತೆ ಇತರ ಕೆಲವು ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಹಿಂದಿ ಭಾಷೆಯಲ್ಲಿ ಪ್ರಸಾರ ಮಾಡಲಾಗುತ್ತಿದೆ.

ಇವುಗಳನ್ನು ಯಾರಿಗಾಗಿ ಪ್ರಸಾರ ಮಾಡಲಾಗುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಆಕಾಶವಾಣಿ ನಿಲಯಕ್ಕೆ ಇದ್ದಂತಿಲ್ಲ. ಆಕಾಶವಾಣಿಯ ಬಹುತೇಕ ಕೇಳುಗರು ಗ್ರಾಮೀಣ ಭಾಗದವರೇ ಆಗಿರುವುದರಿಂದ ಎಲ್ಲ ಜಾಹೀರಾತುಗಳನ್ನು ಈ ಹಿಂದಿನಂತೆ ಕನ್ನಡದಲ್ಲೇ ಪ್ರಸಾರ ಮಾಡಲು ಕ್ರಮ ಕೈಗೊಳ್ಳಬೇಕು.

-ಯಲುವಹಳ್ಳಿ ಸೊಣ್ಣೇಗೌಡ, ಚಿಕ್ಕಬಳ್ಳಾಪುರ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)