ಮಂಗಳವಾರ, ಮಾರ್ಚ್ 31, 2020
19 °C

ಪ್ಲಾಸ್ಟಿಕ್‌ ನಿಷೇಧ: ಪುರಿ ದೇಗುಲ ಮಾದರಿಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುರಿ ಜಗನ್ನಾಥ ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಏಪ್ರಿಲ್‌ 1ರಿಂದ ಸಂಪೂರ್ಣವಾಗಿ ನಿಷೇಧಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿರುವುದು ಸಂತೋಷದ ಸಂಗತಿ.

ಪ್ಲಾಸ್ಟಿಕ್ ಎಂಬ ಮಹಾಮಾರಿಯಿಂದ ಪರಿಸರಕ್ಕೆ ಆಗುವ ಹಾನಿ ಅಷ್ಟಿಷ್ಟಲ್ಲ. ದೇವಸ್ಥಾನ ಎಂದಮೇಲೆ ಪೂಜೆ– ಪುನಸ್ಕಾರದ ಹೆಸರಿನಲ್ಲಿ ಪ್ಲಾಸ್ಟಿಕ್ ಅನ್ನು ಜನ ಎಗ್ಗಿಲ್ಲದೇ ಬಳಸುತ್ತಾರೆ. ಎಷ್ಟು ಜಾಗೃತಿ ಮೂಡಿಸಿದರೂ ಜನರು ಪ್ಲಾಸ್ಟಿಕ್ ಬಳಸುವುದನ್ನು ಬಿಡುತ್ತಿಲ್ಲ. ಹೀಗಾಗಿ, ಜಗನ್ನಾಥ ದೇವಾಲಯದಂತೆ ದೇಶದ ಎಲ್ಲ ದೇವಾಲಯಗಳೂ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದರೆ ಪರಿಸರ ಮಾಲಿನ್ಯವನ್ನು ಎಷ್ಟೋ ಮಟ್ಟಿಗೆ ತಡೆಗಟ್ಟಿದಂತೆ ಆಗುತ್ತದೆ.

-ರಾಜು ಬಿ. ಲಕ್ಕಂಪುರ, ಜಗಳೂರು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)