ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌಲ್ಯಮಾಪನ ಆರಂಭಿಸಿ

Last Updated 7 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಎರಡನೇ ಪಿ.ಯು.ಸಿ.ಯ ಇಂಗ್ಲಿಷ್‌ ಭಾಷೆ ಒಂದನ್ನು ಹೊರತುಪಡಿಸಿ ಮಿಕ್ಕ ಎಲ್ಲ ವಿಷಯಗಳ ಪರೀಕ್ಷೆಗಳೂ ಈಗಾಗಲೇ ಮುಗಿದಿವೆ. ಲಾಕ್‌ಡೌನ್ ಕಾರಣದಿಂದ ಇಂಗ್ಲಿಷ್‌ ಭಾಷಾ ಪರೀಕ್ಷೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿದೆ. ಈ ಪರೀಕ್ಷೆಯನ್ನು ನಡೆಸುವುದೋ ಬೇಡವೋ ಎಂಬ ತೀರ್ಮಾನ ಒತ್ತಟ್ಟಿಗಿರಲಿ. ಆದರೆ, ಈಗಾಗಲೇ ಮುಗಿದಿರುವ ಪರೀಕ್ಷೆಗಳ ಮೌಲ್ಯಮಾಪನವನ್ನು ಆರಂಭಿಸುವುದರ ಕುರಿತು ಚಿಂತಿಸಲಿ. ಕೊನೆಯ ಕ್ಷಣದಲ್ಲಿ ಎಲ್ಲವನ್ನೂ ಒಟ್ಟಿಗೆ ಮಾಡಲು ಹೋಗಿ ಮತ್ತೊಂದು ಗೊಂದಲಕ್ಕೆ ಈಡಾಗುವುದು ಬೇಡ.

ತೀರಾ ಸಂದಿಗ್ಧ ಪರಿಸ್ಥಿತಿ ಉಂಟಾದರೆ, ಈ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಇಂಗ್ಲಿಷ್‌ ಭಾಷಾ ಪರೀಕ್ಷೆಯನ್ನೇ ನಡೆಸದೆ, ಮಿಕ್ಕ ಎಲ್ಲವುಗಳ ಫಲಿತಾಂಶ ನೀಡಲಿ. ಅದರ ಆಧಾರದ ಮೇಲೆ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗ ಮುಂದುವರಿಸಬಹುದು. ಇಲ್ಲವಾದಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ.

- ಪತ್ತಂಗಿ ಎಸ್. ಮುರಳಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT