ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋಟೊ ಸಂಸ್ಕೃತಿ ಏಕೆ?

Last Updated 9 ಏಪ್ರಿಲ್ 2020, 20:15 IST
ಅಕ್ಷರ ಗಾತ್ರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಸರ್ಕಾರ ಮಾತ್ರವಲ್ಲದೆ ರಾಜಕೀಯ ಪಕ್ಷಗಳು, ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕರು ಆಹಾರ, ಪಡಿತರ ಮತ್ತಿತರ ಅವಶ್ಯ ವಸ್ತುಗಳನ್ನು ನೀಡುತ್ತಿರುವುದು ಸ್ತುತ್ಯರ್ಹ ಕಾರ್ಯ. ಆದರೆ ದಾತರು ಈ ಕಾರ್ಯಕ್ಕೆ ಸುದ್ದಿ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುತ್ತಿರುವುದನ್ನುನೋಡಿದರೆ, ಪ್ರಚಾರದ ಸಲುವಾಗಿಯೇ ಇವರು ಹೀಗೆ ಹಂಚುತ್ತಿರಬಹುದು ಎನಿಸುತ್ತದೆ. ಬಹುತೇಕ ಕಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗುಂಪಾಗಿ ಫೋಟೊ ತೆಗೆಸಿಕೊಳ್ಳುತ್ತಿರುವುದು ಪೊಲೀಸರಿಗೆ
ಬಿಸಿತುಪ್ಪವಾಗಿದೆ. ನಿಜವಾಗಲೂ ಸಮಾಜಸೇವೆಯ ಉದ್ದೇಶ ಇದ್ದರೆ, ಈ ಸಂದರ್ಭದಲ್ಲಿ ಫೋಟೊ ಸಂಸ್ಕೃತಿ ಏಕೆ?

- ಕೆ.ಶ್ರೀನಿವಾಸ ರಾವ್, ಹರಪನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT