ಬುಧವಾರ, ಜೂಲೈ 8, 2020
28 °C

ಅವಿವೇಕದ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ, ಸರ್ಕಾರ ಎಂಥಾ ಅವಿವೇಕತನದಿಂದ ಈ ಸ್ಥಿತಿಯನ್ನು ನಿಭಾಯಿಸುತ್ತಿದೆ ಎಂಬುದು ತಿಳಿಯುತ್ತದೆ. ಒಂದೂವರೆ ತಿಂಗಳಿಂದಲೂ ಸರಿಯಾಗಿ ಊಟ ಸಿಕ್ಕರೆ ಅದೇ ಮಹಾಭಾಗ್ಯ ಎಂದು ಪರಿತಪಿಸಿದ್ದ ಕಾರ್ಮಿಕರನ್ನು ಊರಿಗೆ ಕಳುಹಿಸುವುದಕ್ಕೆ ಆರಂಭದಲ್ಲಿ ದುಪ್ಪಟ್ಟು ಪ್ರಯಾಣ ದರ ವಿಧಿಸಿದ್ದು ಹೇಗೆ ಸಮರ್ಥನೀಯ? ಕಾರ್ಮಿಕರು ಅಷ್ಟೊಂದು ಹಣವನ್ನು ಎಲ್ಲಿಂದ ತರುತ್ತಾರೆ ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲವಾಯಿತೇ?

ಸರ್ಕಾರದ ಪ್ರತೀ ನಡೆಯನ್ನೂ ಜನ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಜನಪ್ರತಿನಿಧಿಗಳ ಇಂತಹ ಅಸಮರ್ಥತೆಗೆ ಪಕ್ಷದ ನಮ್ಮಂತಹ ಕಾರ್ಯಕರ್ತರು ಜನರಿಗೆ ಉತ್ತರಿಸಲು ಕಷ್ಟವಾಗುತ್ತದೆ. ಇಂತಹ ಕ್ಷಿಷ್ಟ ಸಂದರ್ಭಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದಾದರೆ, ಅಂತಹವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡಲಿ.

-ನರಸಿಂಹಮೂರ್ತಿ, ಬೆಂಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.