ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರ್ವಸತಿ ಸಭೆ!

Last Updated 9 ಜೂನ್ 2020, 19:27 IST
ಅಕ್ಷರ ಗಾತ್ರ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿಯು ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವರಂತಹ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರ ಹುಮ್ಮಸ್ಸು ಹಿಗ್ಗಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ, ಉಳಿದ ಎರಡು ಸ್ಥಾನಗಳಿಗೆ ತಲಾ ಒಬ್ಬರಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ರಮವಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತುಎಚ್‌.ಡಿ.ದೇವೇಗೌಡರನ್ನು ಕಣಕ್ಕೆ ಇಳಿಸಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಇದೇ ಪ್ರಭಾವಿ ನಾಯಕರು ಸೋತು ಸುಣ್ಣವಾಗಿದ್ದರೂ ಮತ್ತೆ ಆಯಾ ಪಕ್ಷಗಳು ಅವರಿಗೆ ರಾಜಕೀಯ ಪುನರ್ವಸತಿ ಕಲ್ಪಿಸಿವೆ. ನಾಲ್ಕು–ಐದು ದಶಕಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಸ್ಥಾನಗಳಲ್ಲಿ ಅಧಿಕಾರವನ್ನು ಅನುಭವಿಸಿ ವಯೋವೃದ್ಧರಾಗಿರುವ ಉಭಯತ್ರರಿಗೆ ಮತ್ತೆ ರಾಜಕೀಯ ಜೀವದಾನ ನೀಡಿರುವುದರಿಂದ, ರಾಜ್ಯಸಭೆಯು ಈ ಪಕ್ಷಗಳ ಪಾಲಿಗೆ ‘ಪುನರ್ವಸತಿ ಸಭೆ’ ಆದಂತಾಗಿದೆ.

-ಡಿ. ಪ್ರಸನ್ನಕುಮಾರ್,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT