ಶುಕ್ರವಾರ, ಆಗಸ್ಟ್ 6, 2021
25 °C

ಹೊಸ ಬಸ್‌ ಖರೀದಿ ತರವಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂದಿನ ಮೂರು ತಿಂಗಳಲ್ಲಿ 4,000 ಹೊಸ ಬಸ್‌ಗಳನ್ನು ಖರೀದಿಸುವುದಾಗಿ ಸಾರಿಗೆ ಸಚಿವರು ಹೇಳಿದ್ದಾರೆ (ಪ್ರ.ವಾ., ಜೂನ್‌ 9). ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ, ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂಬ ಕಾರಣಕ್ಕೆ ನೂರಾರು ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇದು, ನಿಗಮಗಳಲ್ಲಿ ಈಗಾಗಲೇ ಅಗತ್ಯಕ್ಕಿಂತ ಹೆಚ್ಚಿನ ಬಸ್‌ಗಳು ಇರುವುದನ್ನು ದೃಢಪಡಿಸುತ್ತದೆ. ಲಾಕ್‌ಡೌನ್‌ನಿಂದ ಇಲಾಖೆ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಪರಿಸ್ಥಿತಿಯಲ್ಲಿ, ಸಚಿವರು ಹೊಸ ಬಸ್ ಖರೀದಿಗೆ ಆಸಕ್ತಿ ತೋರುವುದು ಉಚಿತವಲ್ಲ.

-ಚಂದ್ರಶೇಖರ ಪುಟ್ಟಪ್ಪ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.