ಶನಿವಾರ, ಜುಲೈ 24, 2021
25 °C

ಜನರ ಕಷ್ಟ ಮನಗಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಜನ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಜನರ ಬಳಿ ದುಡ್ಡು ಹರಿದಾಡಲು ಇನ್ನೂ ಸಮಯಾವಕಾಶ ಬೇಕು. ಆದರೆ ಸರ್ಕಾರ ಮಾತ್ರ ಇದನ್ನು ಗಣನೆಗೆ ತೆಗೆದುಕೊಳ್ಳದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಒಂದೇ ಸಮನೆ ಏರಿಸುತ್ತಿದೆ.  ಸಾರ್ವಜನಿಕ ಸಾರಿಗೆ ಸೇವೆಯನ್ನು ಬಳಸಲು ಜನರು ಇನ್ನೂ ಹಿಂದೇಟು ಹಾಕುತ್ತಿದ್ದಾರೆ, ಹೆಚ್ಚಿನವರು ಸ್ವಂತ ವಾಹನಗಳಲ್ಲಿ ಓಡಾಡಬೇಕಾಗಿದೆ. ಪೆಟ್ರೋಲ್‌ನ ಮೂಲಬೆಲೆಗಿಂತ ಅದರ ಮೇಲೆ ವಿಧಿಸುವ ತೆರಿಗೆಯೇ ಜಾಸ್ತಿ ಇದೆ. ಈ ಹೊರೆ ಇಳಿಸಲು ಸರ್ಕಾರ ಮುಂದಾಗಬೇಕು. ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು.

ರಾಜು ಬಿ. ಲಕ್ಕಂಪುರ, ಜಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.