ಸೋಮವಾರ, ಅಕ್ಟೋಬರ್ 26, 2020
21 °C

ಸರ್ಕಾರಿ ನೌಕರರಿಗೆ ರಾಜಕೀಯ ಸಾಧುವೇ?

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ರಾಜ್ಯದಲ್ಲಿ ಪ್ರಸ್ತುತ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ಜರುಗಲಿವೆ. ವಿವಿಧ ರಾಜಕೀಯ ಪಕ್ಷಗಳ ಧುರೀಣರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಲ್ಲಿ ಸರ್ಕಾರಿ ನೌಕರರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮ್ಮ ಇಷ್ಟದ ಅಭ್ಯರ್ಥಿ ಹಾಗೂ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ, ವಿಶೇಷವಾಗಿ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಯಾವ ಹಿಂಜರಿಕೆಯೂ ಇಲ್ಲದೆ ತೊಡಗಿಕೊಂಡಿರುವ ಸುದ್ದಿ ಕೇಳಿಬರುತ್ತಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನುಸಾರ, ಸರ್ಕಾರಿ ನೌಕರರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜಕಾರಣದಲ್ಲಿ ಹಾಗೂ ಚುನಾವಣೆಯಲ್ಲಿ ಭಾಗವಹಿಸುವುದು, ಚುನಾವಣಾ ಚಿಹ್ನೆಗಳನ್ನು ತಮ್ಮ ವಾಹನ, ಮನೆಗಳ ಮೇಲೆ ಪ್ರದರ್ಶಿಸುವಂತಹ ನಡವಳಿಕೆಗಳನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಶಿಸ್ತು ಕ್ರಮವನ್ನು ಜರುಗಿಸಬಹುದಾಗಿದೆ. ಹೀಗಿದ್ದೂ ಕೆಲ ನೌಕರರು ರಾಜಕಾರಣದಲ್ಲಿ ಪಾಲ್ಗೊಳ್ಳುತ್ತಿರುವುದು ವಿವೇಕಯುತ ನಡೆ ಆಗಲಾರದು.

- ಪ್ರೊ. ಮಲ್ಲಿಕಾರ್ಜುನ ಕಲಮರಹಳ್ಳಿ, ದಾವಣಗೆರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.