ಸೋಮವಾರ, ಆಗಸ್ಟ್ 15, 2022
20 °C

ಅಭ್ಯರ್ಥಿಯ ಆಯ್ಕೆ ಶಾಂತಿಯುತವಾಗಿರಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಹೊಸಪೇಟೆ ತಾಲ್ಲೂಕಿನ ‍ಪೋತಲಕಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಹರಾಜಿನ ಮೂಲಕ ಆಯ್ಕೆ ಮಾಡಲು ಮುಂದಾದ ಕ್ರಮವನ್ನು ಪ್ರಶ್ನಿಸಿದವರ ಮೇಲೇ ಹಲ್ಲೆ ನಡೆಸಿ, ದೂರು ನೀಡಿರುವ ಬಗ್ಗೆ ವರದಿಯಾಗಿದೆ (ಪ್ರ.ವಾ. ಡಿ. 7). ಆ ಗ್ರಾಮದ ‘ಸಮೂಹ ಶಕ್ತಿ’ ಸಂಘಟನೆಯ ಕಾರ್ಯಕರ್ತರು ಅರ್ಹರನ್ನು ನಿಲ್ಲಿಸಬೇಕೆಂದು ನಿರ್ಧರಿಸಿರುವುದು ಸರಿಯಾಗಿದೆ. ಆದರೆ ಗ್ರಾಮದ ಮುಖಂಡರು, ಈ ಅಭಿಪ್ರಾಯವನ್ನು ನಿರ್ಲಕ್ಷಿಸಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇರುತ್ತದೆ. ಚುನಾವಣೆಗೋಸ್ಕರ ಸ್ನೇಹ ಸಂಬಂಧಗಳನ್ನು ಹಾಳು ಮಾಡಿಕೊಳ್ಳದೆ, ಶಾಂತಿಯುತವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸೂಕ್ತ. 

- ಶ್ರೀಧರ ಎಸ್. ವಾಣಿ, ಕೊಪ್ಪಳ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು