ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ಶೌಚಾಲಯ ಪರಿಗಣಿಸಿ

ಅಕ್ಷರ ಗಾತ್ರ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂಬ ನಿಯಮವಿದೆ. ಕಲ್ಯಾಣ ಕರ್ನಾಟಕದ ಹೆಚ್ಚಿನ ಹಳ್ಳಿಗಳಲ್ಲಿ ಶೌಚಾಲಯಗಳು ಇಲ್ಲವೇ ಇಲ್ಲ. ಇದ್ದರೂ ಅವು ಕಾಗದದಲ್ಲಿ ಮಾತ್ರ. ಬಹಳಷ್ಟು ಮನೆಗಳು ಒತ್ತೊತ್ತಾಗಿದ್ದು, ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಲು ಸ್ಥಳವೇ ಇರುವುದಿಲ್ಲ. ಹೀಗಿರುವಾಗ, ಶೌಚಾಲಯ ನಿರ್ಮಾಣ ಮಾಡುವುದು ಮತ್ತು ಬಳಕೆ ಮಾಡುವುದು ಸವಾಲಿನ ಕೆಲಸವೇ ಸರಿ. ಪರಿಸ್ಥಿತಿ ಹೀಗಿರುವಾಗ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಯಸುವ ಅಭ್ಯರ್ಥಿಯು ತನ್ನ ಮನೆಯಲ್ಲಿ ಶೌಚಾಲಯ ಇದೆ ಎಂದು ಸ್ವಯಂ ಘೋಷಣೆ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವ ಪರಿಪಾಟ ಇದೆ. ಶೌಚಾಲಯ ಇಲ್ಲದೇ ಹೋದರೆ, ‘ಮುಂದೆ ಕಟ್ಟಿಸುತ್ತೇನೆ’ ಎಂಬ ಮುಚ್ಚಳಿಕೆ ಬರೆಸಿಕೊಳ್ಳಲಾಗುತ್ತದೆ.

ಪ್ರತೀ ಅಭ್ಯರ್ಥಿಯ ಮನೆಯಲ್ಲೂ ಕಡ್ಡಾಯವಾಗಿ ಶೌಚಾಲಯ ಇರುವ ಬಗ್ಗೆ ಚುನಾವಣೆ ಆಯೋಗವು ಗಂಭೀರವಾಗಿ ಪರಿಗಣಿಸಬೇಕು. ಸೂಕ್ತ ಸ್ಥಳ ಪರಿಶೀಲನೆ ಮಾಡಬೇಕು. ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆಗ ಸ್ವಚ್ಛ ಭಾರತದ ಕಲ್ಪನೆ ಒಂದಷ್ಟು ಮಟ್ಟಿಗಾದರೂ ಸಾಕಾರಗೊಳ್ಳಲು ಸಾಧ್ಯ.

- ಪ್ರಹ್ಲಾದ ವಾ. ಪತ್ತಾರ, ಯಡ್ರಾಮಿ, ಕಲಬುರ್ಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT