ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜದ ಸ್ವಾಸ್ಥ್ಯ ಕದಡದಿರಿ

ಅಕ್ಷರ ಗಾತ್ರ

ಮಾದಕವಸ್ತು ಪ್ರಕರಣಗಳಲ್ಲಿ ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಅವರ ಮಕ್ಕಳು, ಸಂಬಂಧಿಕರು ಹೆಚ್ಚಿಗೆ ಸಿಲುಕುತ್ತಿರುವುದು ಕಂಡುಬರುತ್ತಿದೆ. ಇದನ್ನು ನೋಡಿದರೆಬಿಡುವಿಲ್ಲದ ಜೀವನದ ಜಂಜಾಟದ ಮಧ್ಯೆ ತಮ್ಮ ಮಕ್ಕಳಿಗೆ ಒಳ್ಳೆಯ ಆಚಾರ-ವಿಚಾರ, ಸಾಮಾಜಿಕ ಕಳಕಳಿಯ ಅರಿವು ಮೂಡಿಸುವಲ್ಲಿ ಕೆಲವರು ವಿಫಲರಾಗಿದ್ದಾರೆ ಎನಿಸುತ್ತದೆ. ಶ್ರೀಮಂತರ ಮಕ್ಕಳಿಗೆ ಕೇಳಿದಷ್ಟು ಹಣ ಸುಲಭವಾಗಿ ಸಿಗುವುದರಿಂದ ಲೇಟ್‌ನೈಟ್ ಪಾರ್ಟಿ, ಮದ್ಯಸೇವನೆ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ಅವರು ದಾಸರಾಗುವ ಅವಕಾಶಗಳು ಹೆಚ್ಚಿಗೆ ಇರುತ್ತವೆ. ಕೆಲವರು ಕುಡಿದ ಅಮಲಿನಲ್ಲಿ ಅಪಘಾತಗಳಿಗೆ ಕಾರಣರಾಗಿ ಅಮಾಯಕರ ಪ್ರಾಣ ತೆಗೆದಿರುವ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವ ಅನೇಕ ಉದಾಹರಣೆಗಳಿವೆ. ತಮ್ಮ ಮಕ್ಕಳು ಏನೇ ತಪ್ಪು ಮಾಡಿದರೂ ಸಮರ್ಥಿಸಿಕೊಳ್ಳುವವರಿದ್ದಾರೆ. ಅಂತಹವರು, ಪುತ್ರನ ವಿಷಯದಲ್ಲಿ ನಿರ್ದಾಕ್ಷಿಣ್ಯ ನಿರ್ಧಾರ ಕೈಗೊಂಡ ಹಾಲಿವುಡ್‌ ನಟ ಜಾಕಿಚಾನ್ ಅವರನ್ನು ನೋಡಿ ಕಲಿಯಬೇಕಾಗಿದೆ.

- ಮುರುಗೇಶ ಡಿ.,ದಾವಣಗೆರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT