ಶನಿವಾರ, ಆಗಸ್ಟ್ 8, 2020
23 °C

ವಾಚಕರ ವಾಣಿ | ‍ಪಠ್ಯಕ್ರಮ ಪರಿಷ್ಕರಣೆ: ಪುನರ್‌ಪರಿಶೀಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್‌- 19ರ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತನ್ನ ಪಠ್ಯಕ್ರಮವನ್ನು ಪರಿಷ್ಕರಿಸಿದೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಆದರೆ, ಪ್ರಮುಖವಾಗಿ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಒಕ್ಕೂಟ ವ್ಯವಸ್ಥೆ, ಪೌರತ್ವ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯಂತಹ ವಿಷಯಗಳನ್ನು ಕೈಬಿಟ್ಟಿರುವುದನ್ನು ಪುನರ್‌ಪರಿಶೀಲಿಸಬೇಕಾದ ಅನಿವಾರ್ಯ ಇದೆ.

ಏಕೆಂದರೆ ಒಕ್ಕೂಟ ವ್ಯವಸ್ಥೆ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಬೇರುಗಳು ಭಾರತವನ್ನು ವೈವಿಧ್ಯಮಯ 130 ಕೋಟಿ ಜನಸಂಖ್ಯೆಯ ಅಖಂಡ ರಾಷ್ಟ್ರವಾಗಿ ಮುಂದುವರಿಸಿಕೊಂಡು ಹೋಗುತ್ತಿವೆ. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾದ್ದರಿಂದ ಅವರಿಗೆ ಇಂತಹ ಪರಿಕಲ್ಪನೆಗಳನ್ನು ತಿಳಿಸವಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದಾಗಿದೆ.
-ಪ್ರವೀಣ ನಾಗಪ್ಪ ಯಲವಿಗಿ, ಹಾವೇರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು