ವಾಚಕರ ವಾಣಿ: ವಿಳಂಬ ನೀತಿಯೂ ಭ್ರಷ್ಟಾಚಾರವೇ
ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಎಫ್ಡಿಎ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಅದೇ ವರ್ಷದ ಸೆಪ್ಟೆಂಬರ್ನಲ್ಲಿ ಕೇವಲ ಏಳು ತಿಂಗಳ ಅಂತರದಲ್ಲಿ ಬಿಡುಗಡೆ ಮಾಡಿತ್ತು. ಆದರೆ ಆ ವರ್ಷದ ಸೆಪ್ಟೆಂಬರ್ನಲ್ಲಿ ನಡೆದ ಎಸ್ಡಿಎ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡದೆ ಮುಂದೂಡುತ್ತಿದೆ. ಇದರ ಹಿಂದಿನ ಉದ್ದೇಶವೇನು ಎಂಬುದು ಅರ್ಥವಾಗುತ್ತಿಲ್ಲ.
ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಬರೆದ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನವನ್ನು ಬರೀ ಒಂದು ತಿಂಗಳಿನಲ್ಲಿ ಪೂರ್ಣಗೊಳಿಸಿ ಫಲಿತಾಂಶವನ್ನು ಪ್ರಕಟಿಸಬಹುದಾದರೆ, ಒಂದೂವರೆ ಲಕ್ಷ ಅಭ್ಯರ್ಥಿಗಳಷ್ಟೇ ಬರೆದಿರುವ ಎಸ್ಡಿಎ ಪರೀಕ್ಷಾ ಫಲಿತಾಂಶಕ್ಕಾಗಿ ವರ್ಷಾನುಗಟ್ಟಲೆ ತೆಗೆದುಕೊಳ್ಳುವುದು ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ. ಇದು ಕೂಡ ಒಂದು ರೀತಿ ಭ್ರಷ್ಟಾಚಾರವೇ ಆಗಿದೆ.
–ಸುಜ್ಜಲೂರು ವಿಜಿ, ಟಿ.ನರಸೀಪುರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.