ಬೆಂಗಳೂರಿನಲ್ಲಿ ಜಲಮಂಡಳಿ ಕಾಮಗಾರಿ ಸಲುವಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಇತ್ತೀಚೆಗೆ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ನಿಜಕ್ಕೂ ಆಡಳಿತ ವ್ಯವಸ್ಥೆ ತಲೆ ತಗ್ಗಿಸುವಂಥದ್ದು. ತನ್ನದಲ್ಲದ ತಪ್ಪಿನಿಂದ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಹೊಸದೇನಲ್ಲ. ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರರು ಮೃತಪಡುವುದು, ಮಳೆ ಬಂದಾಗ ರಾಜಕಾಲುವೆಯಲ್ಲಿ ಕೊಚ್ಚಿ ಹೋಗುವುದು... ಹೀಗೆ ನಾನಾ ನಿರ್ಲಕ್ಷ್ಯಗಳಿಗೆ ಇನ್ನೆಷ್ಟು ಮುಗ್ಧ ಜೀವಗಳು ಬಲಿಯಾಗಬೇಕೋ.

ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಪಡೆಯುವ ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಗಿಸಿದರೆ ಇಂತಹ ಅವಘಡಗಳನ್ನು ತಪ್ಪಿಸಬಹುದು. ಬೆಂಗಳೂರಿನಂತಹ ಮಹಾನಗರದಲ್ಲಿ ಸಂಚಾರ ದಟ್ಟಣೆ ಅತಿಯಾಗಿ
ರುವುದರಿಂದ ಕಡ್ಡಾಯವಾಗಿ ಸೂಚನಾ ಫಲಕಗಳನ್ನು ರಾತ್ರಿ ವೇಳೆಯೂ ಕಾಣಿಸುವಂತೆ ಹಾಕಿ, ಕಾಮಗಾರಿ ಮುಗಿಯುವವರೆಗೆ ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕು. ಆಗ ಇಂತಹ ಅನಾಹುತಗಳನ್ನು ತಪ್ಪಿಸಬಹುದು. ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿ ಆದಷ್ಟು ಬೇಗ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಅವಶ್ಯ. ಇಲ್ಲವಾದರೆ ಎಷ್ಟೋ ಕುಟುಂಬಗಳಿಗೆ ಆಧಾರವಾಗಿರುವ ಜೀವಗಳು ಬಲಿಯಾಗಿ ಸಂಸಾರಗಳು ಬೀದಿಪಾಲಾಗಬೇಕಾಗುತ್ತದೆ. ಇದು ಪರೋಕ್ಷವಾಗಿ ದೇಶದ ಅಭಿವೃದ್ಧಿಗೆ ಹಿನ್ನಡೆಯೇ ಆಗಿರುವುದರಿಂದ ಅಧಿಕಾರಿಗಳು ಜವಾಬ್ದಾರಿಯನ್ನು ಅರಿತು ನಿಷ್ಠೆಯಿಂದ ಮೇಲ್ವಿಚಾರಣೆ ನಡೆಸಿ ಅವಘಡಗಳನ್ನು ತಪ್ಪಿಸಬೇಕು.
-ಪುಷ್ಪಲತಾ ಎಂ.,ಟಿ.ನರಸೀಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.