ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಅಮಾಯಕರ ಬಲಿ

Last Updated 20 ಸೆಪ್ಟೆಂಬರ್ 2021, 20:05 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ಜಲಮಂಡಳಿ ಕಾಮಗಾರಿ ಸಲುವಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಇತ್ತೀಚೆಗೆ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ನಿಜಕ್ಕೂ ಆಡಳಿತ ವ್ಯವಸ್ಥೆ ತಲೆ ತಗ್ಗಿಸುವಂಥದ್ದು. ತನ್ನದಲ್ಲದ ತಪ್ಪಿನಿಂದ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಹೊಸದೇನಲ್ಲ. ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರರು ಮೃತಪಡುವುದು, ಮಳೆ ಬಂದಾಗ ರಾಜಕಾಲುವೆಯಲ್ಲಿ ಕೊಚ್ಚಿ ಹೋಗುವುದು... ಹೀಗೆ ನಾನಾ ನಿರ್ಲಕ್ಷ್ಯಗಳಿಗೆ ಇನ್ನೆಷ್ಟು ಮುಗ್ಧ ಜೀವಗಳು ಬಲಿಯಾಗಬೇಕೋ.

ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಪಡೆಯುವ ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಗಿಸಿದರೆ ಇಂತಹ ಅವಘಡಗಳನ್ನು ತಪ್ಪಿಸಬಹುದು. ಬೆಂಗಳೂರಿನಂತಹ ಮಹಾನಗರದಲ್ಲಿ ಸಂಚಾರ ದಟ್ಟಣೆ ಅತಿಯಾಗಿ
ರುವುದರಿಂದ ಕಡ್ಡಾಯವಾಗಿ ಸೂಚನಾ ಫಲಕಗಳನ್ನು ರಾತ್ರಿ ವೇಳೆಯೂ ಕಾಣಿಸುವಂತೆ ಹಾಕಿ, ಕಾಮಗಾರಿ ಮುಗಿಯುವವರೆಗೆ ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕು. ಆಗ ಇಂತಹ ಅನಾಹುತಗಳನ್ನು ತಪ್ಪಿಸಬಹುದು. ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿ ಆದಷ್ಟು ಬೇಗ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಅವಶ್ಯ. ಇಲ್ಲವಾದರೆ ಎಷ್ಟೋ ಕುಟುಂಬಗಳಿಗೆ ಆಧಾರವಾಗಿರುವ ಜೀವಗಳು ಬಲಿಯಾಗಿ ಸಂಸಾರಗಳು ಬೀದಿಪಾಲಾಗಬೇಕಾಗುತ್ತದೆ. ಇದು ಪರೋಕ್ಷವಾಗಿ ದೇಶದ ಅಭಿವೃದ್ಧಿಗೆ ಹಿನ್ನಡೆಯೇ ಆಗಿರುವುದರಿಂದ ಅಧಿಕಾರಿಗಳು ಜವಾಬ್ದಾರಿಯನ್ನು ಅರಿತು ನಿಷ್ಠೆಯಿಂದ ಮೇಲ್ವಿಚಾರಣೆ ನಡೆಸಿ ಅವಘಡಗಳನ್ನು ತಪ್ಪಿಸಬೇಕು.
-ಪುಷ್ಪಲತಾ ಎಂ.,ಟಿ.ನರಸೀಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT