ಗುರುವಾರ , ಮೇ 26, 2022
24 °C

ಚಲನಚಿತ್ರ ಪ್ರಶಸ್ತಿ: ಮುಹೂರ್ತ ಕೂಡಿಬರಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದಾರೆ. ಆದರೆ ಕಳೆದ ಮೂರು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿಲ್ಲ. ಜೊತೆಗೆ ಸಹಾಯಧನದ ಪ್ರಕ್ರಿಯೆ ಕೂಡಾ. ವಿಚಿತ್ರವೆಂದರೆ, ಕಳೆದ ಎರಡು ವರ್ಷಗಳ ಪ್ರಶಸ್ತಿ ಮತ್ತು ಸಹಾಯಧನ ಸಮಿತಿಗಳನ್ನೂ ರಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ!

ಕೇಂದ್ರ ಸರ್ಕಾರ ಮಾತ್ರ ಆಯಾ ವರ್ಷದ ಚಲನಚಿತ್ರ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿ ತನ್ನ ಜವಾಬ್ದಾರಿ ಯನ್ನು ನಿರ್ವಹಿಸುತ್ತಿರುವುದು ಗಮನಾರ್ಹ. ಪ್ರತೀ ಸಿನಿಮಾ ಚಿತ್ರೀಕರಣದ ಸಲುವಾಗಿ ಮುಹೂರ್ತ ನಿಗದಿ ಮಾಡುವ ಸಿನಿಮಾ ಕ್ಷೇತ್ರದಲ್ಲಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮಾತ್ರ ಇನ್ನೂ ಮುಹೂರ್ತ ಕೂಡಿ ಬರದೇ ಇರುವುದು ವಿಪರ್ಯಾಸ.

- ಸಿರಿಗೇರಿ ಯರಿಸ್ವಾಮಿ, ಬಳ್ಳಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು