ಭಾನುವಾರ, ಮಾರ್ಚ್ 7, 2021
32 °C

ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹುಬ್ಬಳ್ಳಿ ಭೇಟಿ ಸಮಯದಲ್ಲಿ ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಆದರೆ, ಈ ಕಾರ್ಯಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಯನ್ನು ಆಮಂತ್ರಿಸದೆ ದೇಶದ ಒಕ್ಕೂಟ ವ್ಯವಸ್ಥೆಗೆ ಅಪಚಾರ ಎಸಗಿದ್ದಾರೆ.

ಈ ಹಿಂದೆ ಕಲಬುರ್ಗಿ– ಬೀದರ್‌ ರೈಲು ಮಾರ್ಗವನ್ನು ಲೋಕಾರ್ಪಣೆ ಮಾಡುವಾಗಲೂ ಸ್ಥಳೀಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಮಂತ್ರಿಸದೇ ಅವಮಾನಿಸಲಾಗಿತ್ತು. ಪ್ರಧಾನಿ ವಾಕ್ಚಾತುರ್ಯದಲ್ಲಿ ತಮ್ಮ ಈ ನಡವಳಿಕೆಯನ್ನು ಸಮರ್ಥಿಸಿಕೊಳ್ಳಬಹುದು. ಆದರೆ, ಅವರ ಈ ನಡವಳಿಕೆ ಮುಂದಿನ ದಿನಗಳಲ್ಲಿ ದೇಶದ ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ಬಗ್ಗೆ ಮರುಚಿಂತನೆ ಮಾಡುವಂತೆ ಮಾಡಬಹುದು. ಪ್ರತಿಯೊಂದರಲ್ಲೂ ‘ರಾಜಕೀಯ’ ಮಾಡುವ ಈ ಪ್ರವೃತ್ತಿ ದೇಶದ ಒಟ್ಟಾರೆ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲರನ್ನೂ ಕೂಡಿಕೊಂಡು ಹೋಗಬೇಕೆನ್ನುವ ಅವರ ಮಾತು ಮತ್ತು ಕೃತಿಯಲ್ಲಿ ಭಾರಿ ವ್ಯತ್ಯಾಸ ಕಾಣುತ್ತದೆ.

-ರಮಾನಂದ ಶರ್ಮಾ, ಬೆಂಗಳೂರು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.