ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಪರಿಜ್ಞಾನವಿಲ್ಲದೆ ಮತ ಚಲಾವಣೆ

ಅಕ್ಷರ ಗಾತ್ರ

ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಸಿಂಧು ಅಥವಾ ತಿರಸ್ಕೃತಗೊಂಡ ಮತಗಳ ಸಂಖ್ಯೆಯನ್ನು ನೋಡಿದರೆ ಆಶ್ಚರ್ಯವಾಗುತ್ತದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 1,223 ಮತಗಳು, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ 1,270 ಮತಗಳು, ವಾಯವ್ಯ ಪದವೀಧರ ಕ್ಷೇತ್ರದಲ್ಲಿ 9,006 ಮತಗಳು ತಿರಸ್ಕೃತಗೊಂಡಿವೆ! ಮಕ್ಕಳನ್ನು ಮುಂದಿನ ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸುವಂತಹ ಹೊಣೆ ಹೊತ್ತಿರುವ ಶಿಕ್ಷಕರು ಅಸಿಂಧುವಾಗುವಂತೆ ಮತದಾನ ಮಾಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದ ಮೂಲ ಸೆಲೆಯೇ ಮತದಾನ.ಪದವೀಧರರು ಸಹ ಇದರ ಬಗ್ಗೆ ಪರಿಜ್ಞಾನವಿಲ್ಲದೆ ಮತ ಚಲಾಯಿಸಿರುವುದು ಜನಸಾಮಾನ್ಯರು ನೋಡಿ ನಗುವಂತಿದೆ. ಮತದಾನದ ಬಗ್ಗೆ ಮುಂಚಿತವಾಗಿ ತಿಳಿವಳಿಕೆ ನೀಡಿದರೂ ಈ ರೀತಿ ತಪ್ಪು ಮಾಡುವ ಅಸಡ್ಡೆ, ಅವಿವೇಕದ ಪರಿಪಾಟ ನಿಲ್ಲಬೇಕು.

-ಭೀಮಾಶಂಕರ ದಾದೆಲಿ ಹಳಿಸಗರ, ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT