ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಜಾರಿಕೊಳ್ಳುವ ಜಾಣ ನಡೆ!

ಅಕ್ಷರ ಗಾತ್ರ

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ನಿರ್ವಹಣಾ ವೆಚ್ಚ ಸರಿದೂಗಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತೀ ತಿಂಗಳು ₹ 100 ಸಂಗ್ರಹಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಹೊರಡಿಸಿದ್ದ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿರುವುದು ಸ್ವಾಗತಾರ್ಹ. ಆದರೆ ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ನೀಡಿರುವ ಹೇಳಿಕೆಯನ್ನು ಒ‍ಪ್ಪಲಾಗದು.

ತಮ್ಮ ಗಮನಕ್ಕೆ ತಾರದೆ ಆ ಸುತ್ತೋಲೆಯನ್ನು ಹೊರಡಿಸಲಾಗಿತ್ತು ಎಂದು ಸಚಿವರು ಹೇಳಿದ್ದಾರೆ. ಇದು, ಜಾರಿಕೊಳ್ಳುವ ಜಾಣತನದ ನಡೆ. ಸಂಬಂಧಪಟ್ಟ ಸಚಿವರ ಗಮನಕ್ಕೇ ತಾರದೆ ಇಂತಹ ಪ್ರಮುಖ ನಿರ್ಧಾರವನ್ನು ಅಧಿಕಾರಿಗಳೇ ಕೈಗೊಳ್ಳುತ್ತಾರೆ ಎನ್ನುವುದನ್ನು ನಂಬಲಿಕ್ಕೆ ಸಾಧ್ಯವಿಲ್ಲ.

-ಟಿ.ಕೆ. ಸುರೇಶ್,ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT