ಗುರುವಾರ , ಅಕ್ಟೋಬರ್ 22, 2020
21 °C

ವಾಚಕರ ವಾಣಿ: ನಿಯಮ ಗಾಳಿಗೆ ತೂರುವವರು

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಭಾಷಣ ಮಾಡುವ, ಕೊರೊನಾ ಸಂಬಂಧಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಉಪದೇಶಿಸುವ ರಾಜಕಾರಣಿಗಳೇ ತಮ್ಮ ಪಕ್ಷದ ಅಭ್ಯರ್ಥಿಯು ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರೋಡ್ ಶೋ ನಡೆಸುತ್ತಾರೆ, ಸಾವಿರಾರು ಮತದಾರರನ್ನು ಗುಂಪುಗೂಡಿಸಿ ತಮ್ಮ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಮುಂದಾಗುತ್ತಾರೆ. ಇದು ಸರಿಯೇ?

ಮತದಾರರಿಗೆ ಕೊರೊನಾ ಕುರಿತು ಕೊಟ್ಟ ಮುನ್ನೆಚ್ಚರಿಕೆ ಕ್ರಮಗಳನ್ನು ತಾವು ಎಷ್ಟರಮಟ್ಟಿಗೆ ಅನುಸರಿಸುತ್ತಿದ್ದೇವೆ ಎಂದು ರಾಜಕಾರಣಿಗಳು ತಮ್ಮನ್ನು ತಾವು ಕೇಳಿಕೊಳ್ಳಲಿ. ಸ್ವತಃ ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರುವವರು, ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗುವುದು ವಿಪರ್ಯಾಸ. 

 -ಹರೀಶ್ ಬಾಬು ಬಿ., ಬಿ.ಡಿ.ಹಳ್ಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.