ಭಾನುವಾರ, ಅಕ್ಟೋಬರ್ 25, 2020
28 °C

ವಾಚಕರ ವಾಣಿ: ಅಂಗನವಾಡಿ ಅಭಿವೃದ್ಧಿ ಸಮಿತಿ ಅಗತ್ಯ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ರಾಜ್ಯದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳು ಮಹಿಳೆಯರು, ಮಕ್ಕಳ ಆರೋಗ್ಯ ಹಾಗೂ ಬೌದ್ಧಿಕ ಬೆಳವಣಿಗೆಯ ದೃಷ್ಟಿಯಿಂದ ಎಷ್ಟೋ ಕುಟುಂಬಗಳಿಗೆ ಅನುಕೂಲಕರವಾಗಿವೆ. ಗರ್ಭಿಣಿಯರಿಗೆ ಆರೋಗ್ಯದ ಮಾರ್ಗದರ್ಶನ ನೀಡುತ್ತವೆ. ಮಹಿಳೆಯರು ಸಣ್ಣ ಮಕ್ಕಳನ್ನು ಅಂಗನವಾಡಿಗಳಲ್ಲಿ ಬಿಟ್ಟು ತಮ್ಮ ದುಡಿಮೆಗೆ ತೆರಳಲು ಅನುಕೂಲಕರವಾಗಿವೆ. ಆದರೆ ಇತ್ತೀಚೆಗೆ ಅಂಗನವಾಡಿಗಳಲ್ಲಿ ನೀಡಲಾಗುವ ಆಹಾರ ಪದಾರ್ಥಗಳ ಬಗ್ಗೆ ಅಲ್ಲಲ್ಲಿ ಆರೋಪಗಳು ಕೇಳಿಬರುತ್ತಿವೆ. ಮಕ್ಕಳಿಗೆ ಸರಿಯಾಗಿ ಆಹಾರವನ್ನು ನೀಡುವುದಿಲ್ಲ, ಗರ್ಭಿಣಿಯರಿಗೆ ನಿಯಮಬದ್ಧವಾಗಿ ಆಹಾರ ಪದಾರ್ಥಗಳನ್ನು ವಿತರಿಸುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಇಂತಹ ಲೋಪದೋಷಗಳನ್ನು ಕೂಡಲೇ ಸರಿಪಡಿಸಬೇಕು. ಸರ್ಕಾರಿ ಶಾಲೆಗಳಲ್ಲಿ ರಚಿಸಿರುವ ಶಾಲಾಭಿವೃದ್ಧಿ ಸಮಿತಿಗಳ (ಎಸ್‍ಡಿಎಂಸಿ) ಮಾದರಿಯಲ್ಲಿ ಅಂಗನವಾಡಿಗಳಿಗೂ ಸ್ಥಳೀಯರನ್ನು ಒಳಗೊಂಡ ಅಂಗನವಾಡಿ ಅಭಿವೃದ್ಧಿ ಸಮಿತಿಯನ್ನು ರಚಿಸಿದರೆ ಇಂತಹ ಸಮಸ್ಯೆಗಳನ್ನು ನಿಯಂತ್ರಣಕ್ಕೆ ತರಬಹುದು.

 ಮೈಸೂರು ಮಹದೇವಪ್ಪ ಪಿ., ಮೈಸೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.