ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ದಾಳಿ: ಯೋಧರಿಗೆ ಗಾಯ

Last Updated 2 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಜಮ್ಮು : ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಪಡೆಗಳು  ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಮತ್ತು ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಪಾಕ್‌ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ನಡೆಸಿದ ದಾಳಿಯಲ್ಲಿ ಇಬ್ಬರು ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.

ಸುಂದರ್ಬನ್‌ ವಲಯದಲ್ಲಿ ಪಾಕ್‌ ಪಡೆಗಳು ನಡೆಸಿದ ಫಿರಂಗಿ ದಾಳಿಯಿಂದಾಗಿ ಅರಣ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಕಲಾಸಿಯಾದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ ಎಂದು ರಜೌರಿ ಜಿಲ್ಲಾಧಿಕಾರಿ ಶಾಹಿದ್‌ ಇಕ್ಬಾಲ್‌ ಚೌಧರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT