ಬುಧವಾರ, ಅಕ್ಟೋಬರ್ 28, 2020
17 °C

ವಾಚಕರ ವಾಣಿ: ಬಯಲಾಗಲಿ ಜಾತಿಗಣತಿ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು (ಜಾತಿಗಣತಿ) ಇನ್ನೂ ಸರ್ಕಾರದ ಕೈ ಸೇರಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಡೆಸಿದಂತಹ ಸಮೀಕ್ಷೆಯು ಹಲವಾರು ವರ್ಷಗಳಾದರೂ ಇನ್ನೂ ಸರ್ಕಾರಕ್ಕೆ ತಲುಪಿಲ್ಲ ಎಂದರೆ ಏನರ್ಥ? ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಈಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಕಾಟಾಚಾರಕ್ಕೆ ಯಾಕೆ ಸಾರ್ವಜನಿಕರ ಹಣವನ್ನು ಪೋಲು ಮಾಡಿ ಸಮೀಕ್ಷೆ ನಡೆಸಬೇಕಾಗಿತ್ತು?

ಸರ್ಕಾರ ಯಾವ ಕಾರಣಕ್ಕಾಗಿ ಈ ಸಮೀಕ್ಷೆಯನ್ನು ಮಾಡಿಸಿತ್ತು? ಈ ಸಂಬಂಧದ ವರದಿಯನ್ನು ಜನರ ಮುಂದಿಡಲು ಇರುವ ಅಡೆತಡೆಗಳಾದರೂ ಯಾವುವು ಎನ್ನುವುದು ಬಹಿರಂಗವಾಗಬೇಕು. ಜಾತಿಗಣತಿ ಸಮೀಕ್ಷೆಯು ಯಾವುದೇ ಕಾರಣಕ್ಕೂ ಮೂಲೆಗುಂಪಾಗುವಂತೆ ಆಗಬಾರದು.

–ರಾಜು ಬಿ. ಲಕ್ಕಂಪುರ, ಜಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು