ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಮಟ್ಟದಲ್ಲಿ ಬೀಜ ಬ್ಯಾಂಕ್‌ ಇರಲಿ

Last Updated 26 ಜೂನ್ 2022, 19:45 IST
ಅಕ್ಷರ ಗಾತ್ರ

ನಮ್ಮ ರೈತರು ಎದುರಿಸುತ್ತಿರುವ ವಿವಿಧ ಸವಾಲುಗಳಲ್ಲಿ,‌ ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜಗಳು ಸಿಗದಿರುವುದೂ ಒಂದು. ಪ್ರತಿವರ್ಷ ಈ ಸಮಸ್ಯೆ ಇದ್ದೇ ಇರುತ್ತದೆ. ಬಿತ್ತನೆ ಬೀಜ ಪಡೆಯಲು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಕಾಯುವ ಅವರ ಪರಿಸ್ಥಿತಿ ವರ್ಷಗಳಿಂದಲೂ ಬದಲಾಗಿಲ್ಲ. ಈಗ ಕೃಷಿ ಚಟುವಟಿಕೆ ಗರಿಗೆದರಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಿಗದ ಕಾರಣ, ಹದ ಮಾಡಿದ ಜಮೀನನ್ನು ಖಾಲಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಸರ್ಕಾರವು ಬೀಜ ತಯಾರಕ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತೀ ತಾಲ್ಲೂಕು ಮಟ್ಟದಲ್ಲಿ ಬೀಜ ಬ್ಯಾಂಕ್‌ಗಳನ್ನು ಸ್ಥಾಪಿಸಬೇಕು. ಜೊತೆಗೆ, ಸಣ್ಣ ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಸರಿಯಾದ ಸಮಯದಲ್ಲಿ ಸಮಂಜಸವಾದ ಬೆಲೆಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು.

–ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT