ಶುಕ್ರವಾರ, ಜೂನ್ 18, 2021
21 °C

ಕಸಿವಿಸಿಗೊಳಿಸುವ ದೃಶ್ಯಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳು ವ್ಯವಸ್ಥೆಯ ಬಗ್ಗೆ ಬೇಸರ‌ ಮೂಡಿಸುತ್ತಿವೆ. ಒಬ್ಬ ಹೆಣ್ಣುಮಗಳ ಮಾನಹರಣವೇ (ಸತ್ಯಾಸತ್ಯತೆ ಏನೇ ಇರಲಿ) ರಾಜಕೀಯ ಚರ್ಚೆಗೆ ಗ್ರಾಸವಾಗಿರುವುದು ದುರದೃಷ್ಟಕರ.

ಅದರಲ್ಲೂ ಟಿ‌.ವಿ.ಯಲ್ಲಿ ಪದೇಪದೇ ಅದೇ ವಿಷಯ ಪ್ರಸ್ತಾಪವಾಗುತ್ತಿರುವುದು, ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಮತ್ತು ದೃಶ್ಯಗಳು ಯಥಾವತ್ತಾಗಿ ವಿನಿಮಯವಾಗುತ್ತಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ. ಇಂತಹ ದೃಶ್ಯಾವಳಿಗಳು ಯುವಜನರ ಮನಸ್ಸುಗಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಯೋಚಿಸಿದರೆ ಮನಸ್ಸು ಕಸಿವಿಸಿಗೊಳ್ಳುತ್ತದೆ. ದಯವಿಟ್ಟು ಸಂಬಂಧಪಟ್ಟವರು ಇಂತಹ ಬೆಳವಣಿಗೆಗಳನ್ನು ನಿಯಂತ್ರಿಸಲಿ.

ಅಶೋಕ ಓಜಿನಹಳ್ಳಿ, ಕೊಪ್ಪಳ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು