ಮಂಗಳವಾರ, ಜನವರಿ 21, 2020
19 °C

ಪುಂಡರಿಗೆ ಕಾನೂನಿನ ಭಯವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದರೂ ಕೆಲವೆಡೆ ಅಹಿತಕರ ಘಟನೆಗಳು ನಡೆದಿರುವುದು ದುರದೃಷ್ಟಕರ. ಕುಡಿತದ ಅಮಲಿನಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಡ್ರೋನ್‌ ಕ್ಯಾಮೆರಾಗಳನ್ನು ಅಳವಡಿಸಿದ್ದರೂ ಇಂತಹ ಪ್ರಕರಣಗಳು ನಡೆದಿರುವುದನ್ನು ನೋಡಿದರೆ, ಪುಂಡು ಪೋಕರಿಗಳಿಗೆ ಕಾನೂನಿನ ಭಯ ಇಲ್ಲ ಎಂಬುದು ಮನವರಿಕೆಯಾಗುತ್ತದೆ. ಇಂತಹವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿದರೆ ಈ ರೀತಿಯ ಪ್ರಕರಣಗಳು ಕಡಿಮೆ ಆಗಬಹುದು.

–ಎಂ.ಎಸ್.ಉಷಾ ಪ್ರಕಾಶ್, ಮೈಸೂರು

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು