ಮಂಗಳವಾರ, ಆಗಸ್ಟ್ 16, 2022
28 °C

ಐಪಿಎಲ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಪಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗುತ್ತಿದೆ. ಜೊತೆಗೆ ಬೆಟ್ಟಿಂಗ್ ಎಂಬ ಭೂತವೂ ಬರುತ್ತದೆ. ಕೋವಿಡ್‌
ನಿಂದಾಗಿ ಜನ ಆರ್ಥಿಕ ಸಂಕಷ್ಟದಲ್ಲಿದ್ದು ಜೀವನ ನಿರ್ವಹಣೆಗಾಗಿ ಪರದಾಡುವ ಸ್ಥಿತಿ ಇದೆ. ಪ್ರತಿವರ್ಷ ಐಪಿಎಲ್‌ ನಡೆದಾಗಲೆಲ್ಲ ಸಾವಿರಾರು ಕೋಟಿ ಬೆಟ್ಟಿಂಗ್ ವ್ಯವಹಾರ ನಡೆಯುತ್ತದೆ. ಇದರಿಂದ ಸಾವಿರಾರು ಕುಟುಂಬಗಳು ಮನೆಮಠ ಕಳೆದುಕೊಂಡು ಬೀದಿಗೆ ಬೀಳುತ್ತವೆ. ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳೂ ಇವೆ.

ಬೆಟ್ಟಿಂಗ್ ಆಡುವಂತಹವರು ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು, ಯುವಕರು, ನಗರಗಳಲ್ಲಿ ಹೋಟೆಲ್, ಮಾಲ್, ಶೋರೂಂ, ಶಾಪ್‌ಗಳಲ್ಲಿ ಕೆಲಸ ಮಾಡುವಂತಹವರು. ಈಗ ನಗರ, ಪಟ್ಟಣ ಮಾತ್ರವಲ್ಲದೆ ಹಳ್ಳಿಗಳಲ್ಲೂ ಐಪಿಎಲ್ ಬೆಟ್ಟಿಂಗ್ ಮೋಹಕ್ಕೆ ಬಲಿಯಾಗುತ್ತಿದ್ದಾರೆ. ಸರ್ಕಾರ ಇದರ ಗಂಭೀರತೆಯನ್ನು ಅರಿತು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕಾಗಿದೆ.

–ಡಾ. ಗುರುಪ್ರಸಾದ ಎಚ್.ಎಸ್., ಮರಿಯಮ್ಮನಹಳ್ಳಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು