ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಅಂತರ ಕಾಪಾಡುವುದು ತಮಾಷೆಯ ಸಂಗತಿಯಲ್ಲ!

Last Updated 3 ಜನವರಿ 2021, 16:41 IST
ಅಕ್ಷರ ಗಾತ್ರ

ಕೋವಿಡ್–19 ಬಂದ ಆರಂಭದಲ್ಲಿ ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಸರ್ಕಾರ ಕಡ್ಡಾಯಗೊಳಿಸಿತು. ಆದರೆ ಇದೀಗ ಕೋವಿಡ್ ಮಾರ್ಗಸೂಚಿಗಳು ಸಡಿಲವಾಗಿರುವುದರಿಂದ ಈ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿಲ್ಲ. ವೈಕುಂಠ ಏಕಾದಶಿಯಂದು ದೇವಸ್ಥಾನಗಳಲ್ಲಿ ಜನ ಕಿಕ್ಕಿರಿದಿದ್ದರು. ಯಾತ್ರಾ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳಲ್ಲಿಯೂ ದಟ್ಟವಾದ ಸರದಿ ಸಾಲಲ್ಲಿ ತಳ್ಳಾಡಿಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶಿವಗಂಗೆಯಲ್ಲಿ ಜನ ಅಂತರ ಮರೆತದ್ದು ಪತ್ರಿಕೆಗಳಲ್ಲಿ ವರದಿಯಾಗಿತ್ತು.

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶದ ದಿನವಂತೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿಯೂ ಜನ ಅಂತರ ಕಾಯ್ದುಕೊಳ್ಳುವುದನ್ನು ಮರೆತರು. ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ, ಬಿಎಂಟಿಸಿ ಬಸ್‌ಗಳಲ್ಲಿಯೂ ನಿಯಮಗಳು ಪಾಲನೆಯಾಗುತ್ತಿಲ್ಲ. ಮಾಸ್ಕ್ ತೊಡಲು ಇರುವಷ್ಟು ಅಲ್ಪಸ್ವಲ್ಪ ಕಾಳಜಿಯೂ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಕಾಣುತ್ತಿಲ್ಲ. ಈ ಬಗ್ಗೆ ಸರ್ಕಾರ ಎಷ್ಟೇ ಜಾಗೃತಿ ಮೂಡಿಸಲು ಪ್ರಯತ್ನಪಟ್ಟರೂ ಪ್ರಯೋಜನ ಇಲ್ಲದಂತಾಗಿದೆ. ಹಾಗಾಗಿ ಅಂತರ ಕಾಪಾಡಿ ಎಂಬುದು ತಮಾಷೆಯ ಸಂಗತಿಯಂತೆ ಭಾಸವಾಗುತ್ತಿದೆ. ಜನ ಇದನ್ನು ಗಂಭೀರವಾಗಿ ಪರಿಗಣಿಸಬೇಕು.

–ಡಾ. ಶಿವರಾಜ್ ಬ್ಯಾಡರಹಳ್ಳಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT