ಆಡಳಿತಾಧಿಕಾರಿ ಮನಸ್ಸು ಮಾಡಿದರೆ...

ಸೋಮವಾರ, ಮೇ 20, 2019
30 °C

ಆಡಳಿತಾಧಿಕಾರಿ ಮನಸ್ಸು ಮಾಡಿದರೆ...

Published:
Updated:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನದ ಗೌರವ ಪ್ರಾಪ್ತವಾಗಿರುವುದು ಅನಿರೀಕ್ಷಿತವೇನಲ್ಲ. ಹಿಂದೆ ಹಾಸನದ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿ, ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ, ಸೂಚನೆ ಪಡೆದು, ಸಮಾಲೋಚನೆಯ ಮೂಲಕ ವಿಮರ್ಶಿಸಿ, ಫಲಿತಾಂಶ ಹೆಚ್ಚಳಕ್ಕಾಗಿ ಉತ್ತಮ ಕ್ರಿಯಾ ಯೋಜನೆಗಳನ್ನು ರೂಪಿಸಿದ್ದರು. ಜೊತೆಗೆ ಶಿಕ್ಷಕರು ಹೆಚ್ಚುವರಿ ತರಗತಿಗಳನ್ನು ನಡೆಸಿ, ತಾಯಂದಿರ ಸಭೆಗಳನ್ನು ಆಯೋಜಿಸಿ, ಅನುಷ್ಠಾನ ಕಾರ್ಯಯೋಜನೆಗಳನ್ನು ಆಗಾಗ ಅವಲೋಕಿಸಿದ್ದರು. ಈ ಮೂಲಕ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಕಳೆಯುವುದರ ಜೊತೆಗೆ ಕಲಿಕಾ ಪ್ರಕ್ರಿಯೆ ಉತ್ತಮವಾಗಿರುವಂತೆ ಎಚ್ಚರಿಕೆ ವಹಿಸಲಾಗಿತ್ತು.

‘ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ’ ಎಂಬುದಕ್ಕೆ ಹಾಸನಕ್ಕೆ ದೊರೆತಿರುವ ಫಲಿತಾಂಶ ನಿದರ್ಶನ. ಜೊತೆಗೆ ಆಡಳಿತಾಧಿಕಾರಿಯೊಬ್ಬರು ಮನಸ್ಸು ಮಾಡಿದರೆ ಏನೆಲ್ಲಾ ಬದಲಾವಣೆ ತರಬಹುದು ಎಂಬುದಕ್ಕೂ ಉದಾಹರಣೆಯಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !