ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಯೋಜನೆ: ದುರುಪಯೋಗ ನಿಲ್ಲಿಸಿ

Last Updated 14 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಒಂದು ಉತ್ತಮ ಯೋಜನೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಯೋಜನೆಯ ದುರುಪಯೋಗದ ಪ್ರಮಾಣ ಹೆಚ್ಚಾಗುತ್ತಿದೆ.

ಯೋಜನೆಯ ಅನುದಾನವನ್ನು ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡುತ್ತಿರುವುದು ಗ್ರಾಮ ಪಂಚಾಯಿತಿಯ ಕೆಲವು ಪ್ರತಿನಿಧಿಗಳಿಗೆ ವರದಾನದಂತಾಗಿದೆ. ಅವರು ಈ ಯೋಜನೆಯ ಕಾಮಗಾರಿಗಳನ್ನು ತಮಗೆ ಬೇಕಾದಂತೆ ನಿಯಂತ್ರಿಸಿ ತಮ್ಮಿಷ್ಟದ ಗುತ್ತಿಗೆದಾರರ ಅಥವಾ ಸಂಬಂಧಿಕರ ಮೂಲಕ ಇಲ್ಲವೇ ಬೇನಾಮಿ ಹೆಸರಿನಲ್ಲಿ ಗುತ್ತಿಗೆ ಮಾಡಿಸಿ, ಜಾಬ್ ಕಾರ್ಡ್‌ದಾರರ ಹೆಸರಿನಲ್ಲಿ ಯಂತ್ರೋಪಕರಣಗಳನ್ನು ಬಳಸಿ, ನಂತರ ಕಾರ್ಡ್‌ದಾರರ ಸಹಿ ಪಡೆದು, ಲೆಕ್ಕ ತೋರಿಸಿ ಲಾಭ ಪಡೆಯುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡು, ಯೋಜನೆಯ ಸವಲತ್ತು ಫಲಾನುಭವಿಗಳಿಗೆ ಮಾತ್ರ ದೊರಕುವಂತೆ ಮಾಡಬೇಕು.

–ದಿಲೀಪ್ ಕುಮಾರ್ ಕೆ., ಬರಗೇನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT