ಶುಕ್ರವಾರ, ಫೆಬ್ರವರಿ 28, 2020
19 °C

ನೀಚರಿಗೆ ತಕ್ಕ ಶಿಕ್ಷೆ ಆಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಲವು ಪುಂಡು–ಪೋಕರಿಗಳು ತಮ್ಮ ಹೊಲಸು ಕೆಲಸಗಳಿಂದ ದೇಶದ ಮಾನವನ್ನು ವಿದೇಶಗಳ ಮುಂದೆ ಹರಾಜು ಹಾಕುತ್ತಿದ್ದಾರೆ. ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬಂದಿದ್ದ ವಿದೇಶಿ ಮಹಿಳೆಯೊಬ್ಬರನ್ನು ಓಲಾ ಕ್ಯಾಬ್‌ಗೆ ಹತ್ತಿಸಿಕೊಂಡಿದ್ದ ಚಾಲಕ ಹಾಗೂ ಆತನ ಇಬ್ಬರು ಸಹಚರರು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಬೆತ್ತಲೆ ಮಾಡಿ, ನಡುರಾತ್ರಿಯಲ್ಲಿಯೇ ಕಾರಿನಿಂದ ಹೊರದಬ್ಬಿ ಹೋಗಿರುವ ಘಟನೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿರುವುದು ಆಘಾತಕಾರಿ. ಇಂತಹ ನೀಚರಿಗೆ ತಕ್ಕ ಶಿಕ್ಷೆ ಆಗಬೇಕು. ಅಂದರೆ ಮಾತ್ರ, ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮೆಚ್ಚಿ ಬರುವ ಅದೆಷ್ಟೋ ವಿದೇಶಿಯರಿಗೆ ನಮ್ಮ ದೇಶದ ಬಗ್ಗೆ ಗೌರವ ಉಳಿಯಲು ಸಾಧ್ಯ.

ಮಂಜುನಾಥ ಉಮೇಶ ನಾಯ್ಕ, ಮುರ್ಡೇಶ್ವರ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)