ಸ್ವಾಮೀಜಿಗೇಕೆ ರಾಜಕೀಯ?

7

ಸ್ವಾಮೀಜಿಗೇಕೆ ರಾಜಕೀಯ?

Published:
Updated:

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕುರುಬ ಸಮಾಜದ ಕಾರ್ಯಕ್ರಮದಲ್ಲಿ ನಿರಂಜನಾನಂದಪುರಿ ಸ್ವಾಮೀಜಿ, ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ. ಯಡಿಯೂರಪ್ಪನವರು ಸಿದ್ದರಾಮಯ್ಯನವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ, ಹೀಗೇ ಮುಂದುವರಿದರೆ ಚೆನ್ನಾಗಿರುವುದಿಲ್ಲ ಎಂಬ ರೀತಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಮಠದ ಶ್ರೀಗಳಾಗಿ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಬೇಕಾದ ಸ್ಥಾನದಲ್ಲಿ ಇರುವವರೇ ಹೀಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದರೆ ಹೇಗೆ?

ಸ್ವಾಮೀಜಿಗೆ ಸಾಧ್ಯವಾದರೆ, ಸಮಾಜದಲ್ಲಿ ತಪ್ಪುಗಳಾಗದಂತೆ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಲಿ. ಇಲ್ಲವಾದರೆ ಸುಮ್ಮನಿರಲಿ. ಅದು  ಬಿಟ್ಟು ಯಾವುದೇ ಒಬ್ಬ ವ್ಯಕ್ತಿ ಅಥವಾ ಒಂದು ಪಕ್ಷದ ಪರವಾಗಿ ಮಾತನಾಡುವುದು ಯಾವುದೇ ಶ್ರೀಗಳಿಗೆ ಶೋಭೆ ತರುವುದಿಲ್ಲ.

ಮಣಿಕಂಠ ಹಿರೇಮಠ, ಬಾಗಲಕೋಟೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !