ಶನಿವಾರ, ಡಿಸೆಂಬರ್ 3, 2022
27 °C

ವಾಚಕರ ವಾಣಿ: ಪ್ರಜಾತಂತ್ರಕ್ಕೆ ಮಾರಕವಾಗುವ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ನ್ಯಾಯಮೂರ್ತಿಗಳನ್ನು ನೇಮಿಸುವ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಪದ್ಧತಿ ಅಪಾರದರ್ಶಕವಾಗಿದ್ದು ಇದು ಬದಲಾಗಬೇಕು. ಸರ್ಕಾರವೇ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪದ್ಧತಿ ಎಲ್ಲ ರಾಷ್ಟ್ರಗಳಲ್ಲೂ ಇದೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಆಘಾತಕಾರಿ ಹೇಳಿಕೆ (ಪ್ರ.ವಾ., ನ. 6) ನೀಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನ, ಪ್ರಜಾತಂತ್ರದ ಅಡಿಪಾಯಗಳಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಾ ಬಂದಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆ, ಜಿಎಸ್‌ಟಿಯಲ್ಲಿ ಪಕ್ಷಪಾತದ ಧೋರಣೆ ಅನುಸರಿಸಿ, ಒಕ್ಕೂಟ ವ್ಯವಸ್ಥೆಯ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ. ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರಗಳ ಆಡಳಿತದಲ್ಲಿ ಮೂಗು ತೂರಿಸಲಾಗುತ್ತಿದೆ. ಅಂತೆಯೇ ಪ್ರಜಾತಂತ್ರಕ್ಕೆ ಅಡಿಗಲ್ಲಾಗಿ ಉಳಿದಿರುವ ಸುಪ್ರೀಂ ಕೋರ್ಟಿನ ಹಕ್ಕುಗಳಿಗೂ ಚ್ಯುತಿ ತರುವಂತೆ, ನ್ಯಾಯಾಧೀಶರ ನೇಮಕಾತಿಯ ಹಕ್ಕನ್ನೂ ಸರ್ಕಾರ ಸ್ವಾಧೀನಕ್ಕೆ ಪಡೆದರೆ ದೇಶವು ಪ್ರಜಾತಾಂತ್ರಿಕವಾಗಿ ಉಳಿದೀತೆ?‌

–ಕೆ.ಎನ್.ಭಗವಾನ್, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು