ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಂದಿಸದ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಿ

Last Updated 25 ಜೂನ್ 2020, 18:45 IST
ಅಕ್ಷರ ಗಾತ್ರ

ಕೋವಿಡ್‌ ಚಿಕಿತ್ಸೆಗೆ ತಾವು ಸಲ್ಲಿಸಿದ್ದ ಪ್ರಸ್ತಾವದಲ್ಲಿನ ಚಿಕಿತ್ಸಾ ವೆಚ್ಚದ ಪ್ರಮಾಣವನ್ನು ಕಡಿಮೆ ಮಾಡಿರುವ ಸರ್ಕಾರದ ಆದೇಶವನ್ನು ಧಿಕ್ಕರಿಸಲು ಮುಂದಾಗಿರುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ಸರ್ಕಾರ ರದ್ದು ಮಾಡಬೇಕು. ಸರ್ಕಾರ ಈಗ ನಿಗದಿಪಡಿಸಿರುವ ದರವು ಬಡವರಿರಲಿ, ಮಧ್ಯಮ ವರ್ಗದವರೇ ಆಗಲಿ ಭರಿಸಲಾಗದಷ್ಟು ದುಬಾರಿಯಾಗಿದೆ. ಖಾಸಗಿ ಆಸ್ಪತ್ರೆಗಳ ಸ್ಥಾಪನೆ ಸಮಯದಲ್ಲಿ ಸರ್ಕಾರದಿಂದ ಸವಲತ್ತುಗಳನ್ನು ಪಡೆದಿದ್ದವರು ಈಗ ಸರ್ಕಾರದ ಆದೇಶವನ್ನೇ ಧಿಕ್ಕರಿಸುತ್ತಿದ್ದಾರೆ. ‘ಮಾನವೀಯ ಸೇವೆಗಿಂತ ಲಾಭವೇ ಮುಖ್ಯ’ ಎಂಬ ಇಂತಹ ಧೋರಣೆಗೆ ಕಡಿವಾಣ ಹಾಕಲೇಬೇಕು.

-ಟಿ.ಸುರೇಂದ್ರ ರಾವ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT