ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕ ಪ್ರಶಸ್ತಿ: ಆಯ್ಕೆ ಮಾನದಂಡ ಬದಲಾಗಲಿ

ಅಕ್ಷರ ಗಾತ್ರ

ಮಕ್ಕಳು ಹಾಗೂ ಶಾಲೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಶಿಕ್ಷಕರಿಗೆ ಪ್ರತಿವರ್ಷ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು ಶಿಕ್ಷಕರ ಕಾರ್ಯದಕ್ಷತೆಯನ್ನು ಹೆಚ್ಚಿಸಬಹುದು. ಆದರೆ ಪ್ರಶಸ್ತಿಗೆಶಿಕ್ಷಕರು ಅರ್ಜಿ ಸಲ್ಲಿಸಬೇಕಾಗಿದೆ. ಇದು ಬೇಸರದ ಸಂಗತಿ. ಈ ಪರಿಪಾಟ ತಪ್ಪಬೇಕು. ಸ್ವಾಭಿಮಾನಿಯಾಗಿರುವ ಶಿಕ್ಷಕ ತನಗೆ ಪ್ರಶಸ್ತಿ ಕೊಡಿ ಎಂದು ಕೇಳಲು ಮುಜುಗರಪಡಬಹುದು.

ಶಿಕ್ಷಕ ತನ್ನ ವೃತ್ತಿ ಬದುಕಿನಲ್ಲಿ ರೂಢಿಸಿಕೊಂಡು ಬಂದ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕಾರ್ಯದಕ್ಷತೆಯನ್ನ ಶಿಕ್ಷಣ ಇಲಾಖೆಯೇ ಗುರುತಿಸಿ ಪ್ರಶಸ್ತಿ ನೀಡಿದರೆ ಉತ್ತಮ. ಅಲ್ಲದೆ ಎಷ್ಟೋ ಶಿಕ್ಷಕರು ಅರ್ಹತೆ ಇಲ್ಲದಿದ್ದರೂ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಪ್ರಭಾವಿ ರಾಜಕಾರಣಿಗಳ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಪ್ರಶಸ್ತಿ ಪಡೆಯುತ್ತಿರುವುದು ದುರ್ದೈವದ ಸಂಗತಿ. ಹೀಗಾಗಿ ಶಿಕ್ಷಣ ಇಲಾಖೆಯು ಶಿಕ್ಷಕ ಪ್ರಶಸ್ತಿಯ ಆಯ್ಕೆಯ ಮಾನದಂಡವನ್ನು ಬದಲಿಸಲಿ.

- ಹರಳಹಳ್ಳಿ ಪುಟ್ಟರಾಜು,ಪಾಂಡವಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT