ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಟ್ಟ ಸಂಪ್ರದಾಯಕ್ಕೆ ನಾಂದಿ

Last Updated 26 ಅಕ್ಟೋಬರ್ 2020, 19:31 IST
ಅಕ್ಷರ ಗಾತ್ರ

ಕೊರೊನಾ ಲಸಿಕೆಯನ್ನು ಚುನಾವಣಾ ವಿಚಾರವಾಗಿ ಬಳಸಿಕೊಳ್ಳುತ್ತಿರುವ ಕೆಲವು ರಾಜಕೀಯ ಪಕ್ಷಗಳ ನಡೆ ಖಂಡನಾರ್ಹ. ಬಿಹಾರದಲ್ಲಿ ತಾನು ಮತ್ತೆ ಅಧಿಕಾರಕ್ಕೆ ಬಂದರೆ, ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಎನ್‌ಡಿಎ ಮೈತ್ರಿಕೂಟ ಹೇಳಿಕೊಂಡಿದೆ.

ತಮಿಳುನಾಡಿನಲ್ಲಿ ಸಹ ಆಡಳಿತಾರೂಢ ಎಐಎಡಿಎಂಕೆ, ತಾನು ಅಧಿಕಾರಕ್ಕೆ ಬಂದರೆ ಆ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡುವ ವಾಗ್ದಾನ ನೀಡಿದೆ. ಇನ್ನು ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ವೇಳೆಯಲ್ಲಿ ಕೂಡ ಆಡಳಿತಾರೂಢ ಬಿಜೆಪಿ, ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದರೆ ರಾಜ್ಯದ ಜನರಿಗೆ ಉಚಿತ ಲಸಿಕೆಯ ಭರವಸೆ ನೀಡಿದೆ.

ಲಸಿಕೆಯನ್ನು ಚುನಾವಣಾ ವಿಷಯ ಮಾಡಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳು ಒಂದು ಅತ್ಯಂತ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿವೆ. ಜನರ ಪ್ರಾಣದ ವಿಚಾರದಲ್ಲಿ ಚೆಲ್ಲಾಟವಾಡಲು ಹೊರಟಿರುವ ರಾಜಕೀಯ ಪಕ್ಷಗಳ ವಿರುದ್ಧ ಚುನಾವಣಾ ಆಯೋಗವು ಶಿಸ್ತು ಕ್ರಮ ಜರುಗಿಸುವುದು ತೀರಾ ಅಗತ್ಯವಾಗಿದೆ.

ಕೆ.ವಿ.ವಾಸು,ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT