ಶುಕ್ರವಾರ, ಡಿಸೆಂಬರ್ 2, 2022
23 °C

ವಾಚಕರ ವಾಣಿ | ಸಿರಿಧಾನ್ಯ: ಬೇಕಿದೆ ಬೆಂಬಲ ಬೆಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲ್ಯಾಣ ಕರ್ನಾಟಕವನ್ನು ಸಿರಿಧಾನ್ಯಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ಜೊತೆ ಕೇಂದ್ರವೂ ನೆರವು ನೀಡಲಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ (ಪ್ರ.ವಾ., ಆ. 28). ಸಿರಿಧಾನ್ಯ ಬೆಳೆದ ರೈತರು ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಗ್ರಾಹಕರು ಅಂಗಡಿಗಳಲ್ಲಿ ಹೆಚ್ಚಿನ ಬೆಲೆ ನೀಡಿ ಅವುಗಳನ್ನು ಕೊಳ್ಳುತ್ತಿದ್ದಾರೆ. ಇತ್ತ ಬೆಳೆದ ರೈತರಿಗೆ ಲಾಭವಿಲ್ಲ ಅತ್ತ ಗ್ರಾಹಕರಿಗೆ ಹೊರೆಯಾಗಿದೆ.

ಸಿರಿಧಾನ್ಯ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ, ಸರ್ಕಾರ ಖರೀದಿಸಿ ಪಡಿತರ, ಅಂಗನವಾಡಿ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್‌ಗಳಿಗೆ ಪೂರೈಕೆ ಮಾಡಿದರೆ ರೈತರಿಗೆ, ಗ್ರಾಹಕರಿಗೆ ಅನುಕೂಲ. 2023ರ ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿರಿಧಾನ್ಯ ಬೀಜ ಉತ್ಪಾದನೆ, ಸಂಸ್ಕರಣೆಗೆ ಒತ್ತು ನೀಡಿ, ಲಾಭದಾಯಕ ಬೆಂಬಲ ಬೆಲೆ ಘೋಷಿಸಬೇಕು.

-ಡಾ. ಎಚ್.ಆರ್‌.ಪ್ರಕಾಶ್, ಕೆ.ಬಿ.ದೊಡ್ಡಿ, ಮಂಡ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು